ದರ್ಶನ್​ಗೆ ವಿಶೇಷ ಆತಿಥ್ಯ, ಜೈಲು ವ್ಯವಸ್ಥೆಯ ವೈಫಲ್ಯ: ಉಮೇಶ್ ಬಣಕಾರ್

Updated on: Aug 28, 2024 | 7:49 PM

ಕೊಲೆ ಆರೋಪಿ, ನಟ ದರ್ಶನ್ ತೂಗುದೀಪ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ದೊರಕಿರುವ ಘಟನೆ ಬಗ್ಗೆ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಆರೋಪಿ, ನಟ ದರ್ಶನ್​ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ದೊರೆತ ಪ್ರಕರಣ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ವಿಶೇಷ ಆತಿಥ್ಯದ ಬಗ್ಗೆ ಇದೀಗ ಮೂರು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ಆದರೆ ಈ ವಿಶೇಷ ಆತಿಥ್ಯ ಪ್ರಕರಣವನ್ನು ಬೇರೆ ಕೋನದಲ್ಲಿಯೂ ಕೆಲವರು ಗಮಿಸಿದ್ದಾರೆ. ಪ್ರಕರಣದ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ‘ಇದು ದರ್ಶನ್ ತಪ್ಪಲ್ಲ, ಬದಲಿಗೆ ಜೈಲು ವ್ಯವಸ್ಥೆಯಲ್ಲಿರುವ ಲೋಪ’ ಎಂದಿದ್ದಾರೆ. ಅಲ್ಲದೆ ದರ್ಶನ್​ ಮನವಿ ಮಾಡಿದಂತೆ ಮನೆ ಊಟ ಕೊಟ್ಟಿದ್ದಿದ್ದರೆ ಹೀಗೆ ಆಗುತ್ತಿರಲಿಲ್ಲವೇನೋ ಎಂಬ ಅಭಿಪ್ರಾಯವನ್ನೂ ಸಹ ವ್ಯಕ್ತಪಡಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More