ಬಾಗಲಕೋಟೆ ಉಪಚುನಾವಣೆ: ಗೆಲುವನ್ನು ತಂದೆಗೆ ಅರ್ಪಿಸಿ ಉಮೇಶ್​​ ಮೇಟಿ ಭಾವುಕ

Edited By:

Updated on: May 04, 2026 | 1:18 PM

ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 21,866 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ತಮ್ಮ ಗೆಲುವನ್ನು ದಿವಂಗತ ತಂದೆಗೆ ಹಾಗೂ ಕಾರ್ಯಕರ್ತರಿಗೆ ಸಮರ್ಪಿಸಿದ ಉಮೇಶ್ ಮೇಟಿ ಭಾವುಕರಾದರು. ಮುಖ್ಯಮಂತ್ರಿಗಳ ಶ್ರಮ ಮತ್ತು ಬೆಂಬಲವನ್ನು ಸ್ಮರಿಸಿದ ಅವರು, ಸಿಎಂ ಅವರನ್ನು ತಂದೆಯ ಸ್ಥಾನದಲ್ಲಿ ಕಂಡಿರುವುದಾಗಿ ಹೇಳಿದರು.

ಬಾಗಲಕೋಟೆ, ಮೇ 04: ಬಾಗಲಕೋಟೆ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಜಯ ಸಾಧಿಸಿದ್ದಾರೆ. 21,866 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಉಮೇಶ್ ಮೇಟಿ 97,941 ಮತಗಳನ್ನು ಪಡೆದರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಗಳಿಸಿದ್ದಾರೆ. ಗೆಲುವಿನ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಮೇಶ್ ಮೇಟಿ, ತಮ್ಮ ವಿಜಯವನ್ನು ತಂದೆ ಹೆಚ್​​.ವೈ. ಮೇಟಿ ಅವರಿಗೆ ಅರ್ಪಿಸಿ ಭಾವುಕರಾದರು. ಅಲ್ಲದೆ, ಇದು ತಮ್ಮ ಗೆಲುವಲ್ಲ, ಕಾರ್ಯಕರ್ತರ ಗೆಲುವು ಎಂದು ಹೇಳಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More