AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Mar 22, 2026 | 1:27 PM

Share

ದಿವಂಗತ ಹೆಚ್.ವೈ. ಮೇಟಿ ಅವರ ದ್ವಿತೀಯ ಪುತ್ರ ಉಮೇಶ್ ಮೇಟಿ ಬಾಗಲಕೋಟೆ ಉಪಚುನಾವಣೆಗೆ ಕಾಂಗ್ರೆಸ್​​ ಟಿಕೆಟ್ ಪಡೆದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿಗಳ ಮಧ್ಯಸ್ಥಿಕೆ ಹಾಗೂ ಕುಟುಂಬದ ಒಮ್ಮತದಿಂದ ಇದು ಸಾಧ್ಯವಾಯಿತು. ಈ ಚುನಾವಣೆಯನ್ನು ತಂದೆ ಹೆಚ್.ವೈ. ಮೇಟಿ ಅವರ ಸೇವೆ ಮತ್ತು ಗೌರವಕ್ಕೆ ಅರ್ಪಿಸುವುದಾಗಿ ಹೇಳಿದ್ದಾರೆ. ಕಾರ್ಯಕರ್ತರ ಬೆಂಬಲದೊಂದಿಗೆ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಾಗಲಕೋಟೆ, ಮಾರ್ಚ್​​ 22: ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್​​ ಅಭ್ಯರ್ಥಿಯಾಗಿ ಮೇಟಿ ಅವರ ದ್ವಿತೀಯ ಪುತ್ರ ಉಮೇಶ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಆ ಬೆನ್ನಲ್ಲೇ ಉಮೇಶ್ ಮೇಟಿ ಅವರು ತಮ್ಮ ತಂದೆಯ ಮೇಲಿನ ಅನುಕಂಪ ಮತ್ತು ಅವರ ಮೇಲಿನ ಪ್ರೀತಿಗೆ ಮತದಾರರು ಸ್ಪಂದಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೆಚ್.ವೈ. ಮೇಟಿ ಅವರು ಮಾಡಿರುವ ಅನೇಕ ಜನಪರ ಕೆಲಸಗಳು, ವಿಶೇಷವಾಗಿ ವೈದ್ಯಕೀಯ ಕಾಲೇಜು ಸ್ಥಾಪನೆಯಂತಹ ಐತಿಹಾಸಿಕ ಕಾರ್ಯಗಳನ್ನು ಸ್ಮರಿಸಿದ ಅವರು ತಂದೆ ನೆನೆದು ಭಾವುಕರಾದ ಪ್ರಸಂಗವೂ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us