Karnataka Assembly Polls: ಜಮಖಂಡಿಯ ಹುನ್ನೂರು ಚೆಕ್ ಪೋಸ್ಟ್ ಮೂಲಕ ದಾಖಲೆಯಿಲ್ಲದೆ ಸಾಗಿಸುತ್ತಿದ್ದ ರೂ 2.1 ಕೋಟಿ ಹಣ ಪೊಲೀಸರಿಂದ ಜಪ್ತಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 10, 2023 | 4:30 PM

ಸಹಕಾರಿ ಬ್ಯಾಕೊಂದರ ಒಂದು ಶಾಖೆಯಿಂದ ಮತ್ತೊಂದು ಶಾಖೆಗೆ ಹಣ ಸಾಗಿಸಲಾಗುತ್ತಿತ್ತು ಅಂತ ಹೇಳಲಾಗಿದೆಯಾದರೂ ಅದಕ್ಕೆ ದಾಖಲೆ ಪತ್ರಗಳಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬಾಗಲಕೋಟೆ: ವಿಧಾನಸಭಾ ಚುನಾವಣೆ (assembly election) ಹಿನ್ನೆಲೆಯಲ್ಲಿ ದಾಖಲೆಯಿಲ್ಲದೆ ಹಣ ಸಾಗಿಸುವ ಕೆಲಸ ಎಗ್ಗಿಲ್ಲದೆ ಸಾಗುತ್ತಿದೆ ಮತ್ತು ಪೊಲೀಸ್ ಹಾಗೂ ಫ್ಲೈಯಿಂಗ್ ಸ್ವ್ಯಾಡ್ (flying squad) ಹಣ ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡುತ್ತಲೇ ಇದ್ದಾರೆ. ಇವತ್ತು ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹುನ್ನೂರು ಚೆಕ್ ಪೋಸ್ಟ್ (Hunnur checkpost) ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ 2.10 ಕೋಟಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಣವನ್ನು ಕಾರೊಂದರಲ್ಲಿ ಮುಧೋಳದಿಂದ ಆಥಣಿ ಕಡೆಗೆ ಸಾಗಿಸಲಾಗುತಿತ್ತು. ಸಹಕಾರಿ ಬ್ಯಾಕೊಂದರ ಒಂದು ಶಾಖೆಯಿಂದ ಮತ್ತೊಂದು ಶಾಖೆಗೆ ಹಣ ಸಾಗಿಸಲಾಗುತ್ತಿತ್ತು ಅಂತ ಹೇಳಲಾಗಿದೆಯಾದರೂ ಅದಕ್ಕೆ ದಾಖಲೆ ಪತ್ರಗಳಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.