ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!

Updated on: Mar 22, 2026 | 9:50 AM

ಹೊನ್ನಾಕಟ್ಟಿ ಚೆಕ್ ಪೋಸ್ಟ್‌ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಹಣವನ್ನು ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಗದು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ, ತಕ್ಷಣವೇ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ರಾಜ್ಯದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಅಕ್ರಮ ಹಣ ಸಾಗಾಟವನ್ನು ತಡೆಯಲು ಮತ್ತು ಮತದಾರರಿಗೆ ಹಣದ ಆಮಿಷ ಒಡ್ಡುವುದನ್ನು ನಿಯಂತ್ರಿಸಲು ವ್ಯಾಪಕ ತಪಾಸಣೆ ಹಾಗೂ ನಿಗಾವನ್ನು ತೀವ್ರಗೊಳಿಸಿದೆ.

ಬಾಗಲಕೋಟೆ, ಮಾರ್ಚ್​ 22: ಹೊನ್ನಾಕಟ್ಟಿ ಚೆಕ್ ಪೋಸ್ಟ್‌ನಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಈ ಹಣವನ್ನು ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರು ಯಾವುದೇ ಸೂಕ್ತ ದಾಖಲೆಗಳಿಲ್ಲದೆ ನಗದು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ, ತಕ್ಷಣವೇ ಹಣವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ರಾಜ್ಯದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಅಕ್ರಮ ಹಣ ಸಾಗಾಟವನ್ನು ತಡೆಯಲು ಮತ್ತು ಮತದಾರರಿಗೆ ಹಣದ ಆಮಿಷ ಒಡ್ಡುವುದನ್ನು ನಿಯಂತ್ರಿಸಲು ವ್ಯಾಪಕ ತಪಾಸಣೆ ಹಾಗೂ ನಿಗಾವನ್ನು ತೀವ್ರಗೊಳಿಸಿದೆ.

 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More