ಬಂಧನದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್​ಗೆ ಮುಳುಬಾಗಿಲು ಬಳಿ 14-ಎಕರೆ ಫಾರ್ಮ್​ಹೌಸ್ ಇದೆ

ಅರುಣ್​ ಕುಮಾರ್​ ಬೆಳ್ಳಿ

Updated on: Oct 24, 2023 | 1:44 PM

ಟೊಮೆಟೊ ಸೇರಿದಂತೆ ಬಗೆಬಗೆಯ ತರಕಾರಿಗಳನ್ನು ಇಲ್ಲಿ ಬೆಳೆಯಲಾಗುತ್ತದಂತೆ. ಸಂತೋಷ್ ಬಂಧನನಕ್ಕೊಳಗಾದ ಸುದ್ದಿ ಕಿವಿಗೆ ಬಿದ್ದ ಮೇಲೆ ತೋಟವನ್ನು ಗುತ್ತಿಗೆ ಪಡೆದಿರುವ ವ್ಯಕ್ತಿ ಅದಕ್ಕೆ ಬೀಗ ಜಡಿದಿದ್ದಾರೆ. ಸಂತೋಷ್ ಭವಿಷ್ಯ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ. ಅವರ ವಕೀಲ ಜಾಮೀನುಗಾಗಿ ಮನವಿ ಸಲ್ಲಿಸಿದ್ದು, ನ್ಯಾಯಾಲಯ ನಾಳೆ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಕೋಲಾರ: ಬಿಗ್ ಬಾಸ್ ಕನ್ನಡ ಸೀಸನ್ 10ರ ಪ್ರತಿಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ವರ್ತೂರು ಸಂತೋಷ್ (Varthur Santosh) ಹುಲಿಯುಗುರು ಪೆಂಡೆಂಟ್ ಧರಿಸಿದ ಅರೋಪ ಹೊತ್ತು ನ್ಯಾಯಾಂಗ ಕಸ್ಟಡಿಯಲ್ಲಿರೋದು (judicial custody) ಕನ್ನಡಿಗರಿಗೆ ಗೊತ್ತಿದೆ. ಅವರಿಗೆ ಸೇರಿದ ಫಾರ್ಮ್ ಹೌಸ್ ಬಗ್ಗೆ ಇವತ್ತು ಮಾಹಿತಿ ಹೊರಬಂದಿದೆ. ಆಫ್ ಕೋರ್ಸ್, ಅವರ ಬಂಧನ ಮತ್ತು ಮುಳಬಾಗಿಲು ತಾಲ್ಲೂಕಿನ ಖಾದ್ರಿಪುರದಲ್ಲಿರುವ 14 ಎಕರೆ ತೋಟದ ನಡುವೆ ಯಾವುದೇ ಸಂಬಂಧವಿಲ್ಲ. ಸುಮಾರು 8 ಕೋಟಿ ರೂ. ಮೌಲ್ಯದ ಫಾರ್ಮ್ ಹೌಸ್ ಅನ್ನು (farmhouse worth Rs 8 crore) ಸಂತೋಷ್ ಸ್ಥಳೀಯರೊಬ್ಬರಿಗೆ ಗುತ್ತಿಗೆ ನೀಡಿ ಕೃಷಿ ಮಾಡಿಸುತ್ತಿದ್ದಾರೆ. ಟೊಮೆಟೊ ಸೇರಿದಂತೆ ಬಗೆಬಗೆಯ ತರಕಾರಿಗಳನ್ನು ಇಲ್ಲಿ ಬೆಳೆಯಲಾಗುತ್ತದಂತೆ. ಸಂತೋಷ್ ಬಂಧನನಕ್ಕೊಳಗಾದ ಸುದ್ದಿ ಕಿವಿಗೆ ಬಿದ್ದ ಮೇಲೆ ತೋಟವನ್ನು ಗುತ್ತಿಗೆ ಪಡೆದಿರುವ ವ್ಯಕ್ತಿ ಅದಕ್ಕೆ ಬೀಗ ಜಡಿದಿದ್ದಾರೆ. ಸಂತೋಷ್ ಭವಿಷ್ಯ ಏನು ಅನ್ನೋದು ಇನ್ನೂ ಗೊತ್ತಾಗಿಲ್ಲ. ಅವರ ವಕೀಲ ಜಾಮೀನುಗಾಗಿ ಮನವಿ ಸಲ್ಲಿಸಿದ್ದು, ನ್ಯಾಯಾಲಯ ನಾಳೆ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.