ವಿಜಯಪುರ: ಲಿಂಗೈಕ್ಯರಾಗಿರುವ ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Shri Siddeshwara Swamiji) ಅವರ ಅಂತಿಮ ದರ್ಶನಕ್ಕೆ ಜನ ಬರುತ್ತಲೇ ಇದ್ದಾರೆ. ಒಂದು ಅಂದಾಜಿನ ಪ್ರಕಾರ ರಾಜ್ಯ ಮತ್ತು ನೆರೆರಾಜ್ಯಗಳಿಂದ ಸುಮಾರು 20 ಲಕ್ಷ ಭಕ್ತರು aಸ್ವಾಮೀಜಿಗಳ ಪಾರ್ಥೀವ ಶರೀರ ಇಟ್ಟಿರುವ ವಿಜಯಪುರದ ಸೈನಿಕ ಶಾಲೆಗೆ (Sainik School) ಬರುವ ನಿರೀಕ್ಷೆಯಿದೆ. ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಎಮ್ ಬಿ ಪಾಟೀಲ (MB Patil) ಅವರು ಸ್ವಾಮೀಜಿಗಳೊಂದಿಗೆ ಚರ್ಚಿಸಿ ಅಂತ್ಯಸಂಸ್ಕಾರಕ್ಕೆ ಅಣಿ ಮಾಡುತ್ತಿರುವುದನ್ನು ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ