ಆಟೋ ಓಡಿಸಿದ ಅಪ್ರಾಪ್ತ ವಿದ್ಯಾರ್ಥಿನಿ, ಚಾಲಕನ ವಿರುದ್ಧ ಕಾನೂನು ಕ್ರಮ
ಅಪ್ರಾಪ್ತ ವಿದ್ಯಾರ್ಥಿನಿ ಆಟೋ ಓಡಿಸುತ್ತಿರುವ ವೈರಲ್ ವಿಡಿಯೋ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದೆ. ಇತರ ವಿದ್ಯಾರ್ಥಿನಿಯರು ಹಿಂದಿರುವಾಗ, ಚಾಲಕ ಪಕ್ಕದಲ್ಲೇ ಕುಳಿತಿದ್ದನು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಪೊಲೀಸರು ಆಟೋ ಚಾಲಕನ ವಿರುದ್ಧ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೊಡ್ಡವರು ಮಕ್ಕಳಿಗೆ ಆದರ್ಶವಾಗಿರಬೇಕು, ತಪ್ಪು ದಾರಿ ತೋರಿಸಬಾರದು ಎಂದು ನೆಟ್ಟಿಗರು ಹೇಳಿದ್ದಾರೆ.
ಮಹಾರಾಷ್ಟ್ರ, ನ.11: ದೊಡ್ಡವರು ಮಕ್ಕಳಿಗೆ ಆದರ್ಶವಾಗಬೇಕು ಹೊರತು, ಅವರಿಗೆ ತಪ್ಪು ದಾರಿಗೆ ತೋರಿಸುವ ವ್ಯಕ್ತಿಗಳು ಆಗಬಾರದು. ಇಲ್ಲೊಂದು ವೈರಲ್ ಆಗಿರುವ ವಿಡಿಯೋ ನೋಡಿದ್ರೆ ಎಲ್ಲವೂ ಅರ್ಥವಾಗುತ್ತದೆ. ದೇಶದಲ್ಲಿ ವಾಹನ ಓಡಿಸಲು ಒಂದಿಷ್ಟು ಕಾನೂನು ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ. ಅದರಲ್ಲಿ ಒಂದು ವಾಹನ ಓಡಿಸಲು ವಯಸ್ಸಿನ ಮಿತಿ, ಆದರೆ ಇಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಆಟೋ ಓಡಿಸಿದ್ದಾಳೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ, ನೆಟ್ಟಿಗರು ವಿಡಿಯೋ ನೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಟೋದ ಹಿಂದಿನ ಸೀಟಿನಲ್ಲಿ ಒಂದಿಷ್ಟು ವಿದ್ಯಾರ್ಥಿನಿಯರು ಇದ್ದರೆ. ಬಾಲಕಿ ಡ್ರೈವರ್ ಸೀಟಿನಲ್ಲಿ ಕುಳಿತುಕೊಂಡು ರಿಕ್ಷಾ ಓಡಿಸುತ್ತಿದ್ದಾಳೆ. ಆಕೆಯ ಪಕ್ಕಾದಲ್ಲೇ ಆಟೋ ಡ್ರೈವರ್ ಇರುವುದನ್ನು ಕೂಡ ಈ ವಿಡಿಯೋದಲ್ಲಿ ನೋಡಬಹುದು. ಈ ಘಟನೆ ಮಹಾರಾಷ್ಟ್ರದ ಖೋಪೋಲಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಇದೀಗ ವಿಡಿಯೋ ವೈರಲ್ ಆಗುತ್ತಿದ್ದಂತೆ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಮೋಟಾರು ವಾಹನ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ರಿಕ್ಷಾ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Nov 11, 2025 04:58 PM
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

