Karnataka Assembly Polls; ಲಕ್ಷ್ಮಣ್ ಸವದಿ ಕಾಂಗ್ರೆಸ್ ಪಕ್ಷ ಸೇರಿದರೆ ನಮ್ಮ ಬಲ ಹೆಚ್ಚುವುದರಲ್ಲಿ ಸಂಶಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ

Updated on: Apr 14, 2023 | 12:11 PM

ಆಪರೇಷನ್ ಕಮಲ ನಡೆಸಿದರಿಗೆ ತಿರುಗುಬಾಣವಾಗುತ್ತಿದೆ ಎಂದು ಮಾಧ್ಯಮದವರು ಹೇಳಿದಾಗ, ಕಾಲಾಯ ತಸ್ಮೈ ನಮಃ ಎಂದು ಹೆಬ್ಬಾಳ್ಕರ್ ಮಾರ್ಮಿಕವಾಗಿ ಹೇಳುತ್ತಾರೆ.

ಬೆಳಗಾವಿ: ಲಕ್ಷ್ಮಣ ಸವದಿಯವರು (Laxman Savadi) ಕಾಂಗ್ರೆಸ್ ಪಕ್ಷ ಸೇರಿದರೆ ಬಲ ಹೆಚ್ಚುವುದರಲ್ಲಿ ಸಂಶಯವಿಲ್ಲ ಆದರೆ ಅವರ ಸೇರ್ಪಡೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪಕ್ಷದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಸವದಿ ಬಿಜೆಪಿಯಿಂದ ಹೊರಬಿದ್ದು ಕಾಂಗ್ರೆಸ್ ಸೇರುವ ಪ್ರಕ್ರಿಯೆ (process) ಜಾರಿಯಲ್ಲಿದೆ, ತಾನು ಇದಕ್ಕಿಂತ ಜಾಸ್ತಿ ಕಾಮೆಂಟ್ ಮಾಡಲಾರೆ ಎಂದು ಹೇಳುತ್ತಾರೆ. ಆಪರೇಷನ್ ಕಮಲ ನಡೆಸಿದರಿಗೆ ತಿರುಗುಬಾಣವಾಗುತ್ತಿದೆ ಎಂದು ಮಾಧ್ಯಮದವರು ಹೇಳಿದಾಗ, ಕಾಲಾಯ ತಸ್ಮೈ ನಮಃ ಎಂದು ಹೆಬ್ಬಾಳ್ಕರ್ ಮಾರ್ಮಿಕವಾಗಿ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.