Rahul in Belagavi; ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಪದವೀಧರರಿಗೆ 2 ವರ್ಷದವರೆಗೆ ಪ್ರತಿ ತಿಂಗಳು ರೂ. 3,000 ನಿರುದ್ಯೋಗ ಭತ್ಯೆ: ರಾಹುಲ್ ಗಾಂಧಿ

|

Updated on: Mar 20, 2023 | 7:32 PM

ಅಧಿಕಾರಕ್ಕೆ ಬಂದ ನಂತರ 5 ವರ್ಷಗಳ ಅವಧಿಯಲ್ಲಿ 10 ಲಕ್ಷ ಯುವಕರಿಗೆ ಸರ್ಕಾರಿ ನೌಕರಿ ಒದಗಿಸುವ ಆಶ್ವಾಸನೆಯನ್ನೂ ರಾಹುಲ್ ಗಾಂಧಿಯವರು ನೀಡಿದರು.

ಬೆಳಗಾವಿ: ನಗರದಲ್ಲಿಂದು ಆಯೋಜಿಸಲಾಗಿದ್ದ ಯುವಕ್ರಾಂತಿ ಸಮಾವೇಶದಲ್ಲಿ ಮಾತಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷದ ಅವಧಿವರೆಗೆ ಮಾಸಿಕ ರೂ. 3,000, ಮತ್ತು ಡಿಪ್ಲೊಮಾ ವ್ಯಾಸಂಗ ಮಾಡಿದರೆ ರೂ. 1,500 ನಿರುದ್ಯೋಗ ಭತ್ಯೆ ನೀಡುವ ಭರವಸೆ ನೀಡಿದರು. ಅಧಿಕಾರಕ್ಕೆ ಬಂದ ನಂತರ 5 ವರ್ಷಗಳ ಅವಧಿಯಲ್ಲಿ 10 ಲಕ್ಷ ಯುವಕರಿಗೆ ಸರ್ಕಾರಿ ನೌಕರಿ ಒದಗಿಸುವ ಆಶ್ವಾಸನೆಯನ್ನೂ ಅವರು ನೀಡಿದರು. ಅಷ್ಟು ಮಾತ್ರವಲ್ಲದೆ, ಅನ್ನಭಾಗ್ಯ ಯೋಜನೆ ಅಡಿ 10 ಕೇಜಿ ಅಕ್ಕಿ, ಗ್ರಹಲಕ್ಷ್ಮಿ ಯೋಜನೆ ಅಡಿ ಗೃಹಿಣಿಯರಿಗೆ ಮಾಸಿಕ ರೂ. 2,000 ಸಹಾಯ ಧನ ಮತ್ತು ಗೃಹಜ್ಯೋತಿ ಯೋಜನೆ ಅಡಿ ತಿಂಗಳಿಗೆ 200 ಯೂನಿಟ್ ವಿದ್ಯತ್ ಅನ್ನು ಉಚಿತವಾಗಿ ನೀಡುವ ಬಗ್ಗೆ ರಾಜ್ಯದ ನಾಯಕರು ಈಗಾಗಲೇ ಘೋಷಣೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ