ವಿಶ್ವವಿಖ್ಯಾತ ಹಂಪಿಗೆ ಯುನೆಸ್ಕೋ ತಂಡ ಭೇಟಿ: 3 ದಿನಗಳಿಂದ ಪ್ರಮುಖ ತಾಣಗಳ ಪರಿಶೀಲನೆ

Edited By:

Updated on: Oct 27, 2026 | 10:22 PM

ವಿಶ್ವವಿಖ್ಯಾತ ಹಂಪಿಗೆ ಯುನೆಸ್ಕೋ ತಂಡ ಮೂರು ದಿನಗಳ ಭೇಟಿ ನೀಡಿದ್ದು, ವಿರೂಪಾಕ್ಷೇಶ್ವರ ದೇವಾಲಯ, ವಿಠಲ ಮಂದಿರ ಸೇರಿದಂತೆ ಪ್ರಮುಖ ತಾಣಗಳನ್ನು ಪರಿಶೀಲಿಸಿದೆ. ಸ್ಮಾರಕಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಸ್ಥಳೀಯರು, ಪ್ರವಾಸಿಗರಿಂದ ಮಾಹಿತಿ ಸಂಗ್ರಹಿಸಿದೆ. ಹಂಪಿಯ ಗತವೈಭವವನ್ನು ಮುಂದಿನ ಪೀಳಿಗೆಗೆ ತಲುಪಿಸಲು ತಂಡವು ಯೋಜನೆ ರೂಪಿಸಲು ಮುಂದಾಗಿದೆ.

ಬಳ್ಳಾರಿ, ಅ.27: ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ವಿಶ್ವವಿಖ್ಯಾತ ಹಂಪಿ ಪ್ರವಾಸಿ ಸ್ಥಳಕ್ಕೆ ಯುನೆಸ್ಕೋ ತಂಡ ಭೇಟಿ ನೀಡಿದೆ. ಕಳೆದ ಮೂರು ದಿನಗಳಿಂದ ಹಂಪಿಯಲ್ಲಿ ಪ್ರವಾಸ ಕೈಗೊಂಡಿರುವ ಈ ತಂಡ, ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ಮಂದಿರ, ಸಂಗೀತ ಮಂಟಪ, ಮಹಾನವಮಿ ದಿಬ್ಬ, ಕಲ್ಲಿನ ರಥ ಸೇರಿದಂತೆ ಹಲವು ಐತಿಹಾಸಿಕ ತಾಣಗಳನ್ನು ಪರಿಶೀಲಿಸಿದೆ. ಯುನೆಸ್ಕೋ ತಂಡವು ಹಂಪಿಯ ಅಭಿವೃದ್ಧಿ, ಸಂರಕ್ಷಣೆ ಹಾಗೂ ಇಲ್ಲಿರುವ ಮೂಲಭೂತ ಸೌಕರ್ಯಗಳ ಕೊರತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದೆ. ಪ್ರವಾಸಿಗರು ಮತ್ತು ಮಾರ್ಗದರ್ಶಕರಿಂದ ಶೌಚಾಲಯ, ಕುಡಿಯುವ ನೀರು, ರಸ್ತೆ ಹಾಗೂ ವಾಹನ ವ್ಯವಸ್ಥೆಗಳ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿವೆ. 1986ರಲ್ಲಿ ವಿಶ್ವ ಪಾರಂಪರಿಕ ತಾಣವಾಗಿ ಸೇರ್ಪಡೆಗೊಂಡ ಹಂಪಿಯನ್ನು ಹೇಗೆ ಸಂರಕ್ಷಿಸಬೇಕು ಮತ್ತು ಅಭಿವೃದ್ಧಿಪಡಿಸಬೇಕು ಎಂಬ ನಿಟ್ಟಿನಲ್ಲಿ ತಂಡವು ಅಧ್ಯಯನ ನಡೆಸಿದೆ. ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಪ್ರವಾಸೋದ್ಯಮ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ್ದು, ಮುಂದಿನ ಪೀಳಿಗೆಗೆ ಹಂಪಿಯ ಇತಿಹಾಸವನ್ನು ಉಳಿಸುವ ಮಹತ್ವವನ್ನು ಒತ್ತಿಹೇಳಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More