ಮೈತ್ರಿಯಿಂದ ಅಸಮಾಧಾನಗೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಕಾಂಗ್ರೆಸ್ನತ್ತ ಮುಖ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್, ಡಿಸಿಎಂ
ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡೂ ಪಕ್ಷಗಳ ನಾಯಕರು ಅಸಮಾಧಾನಗೊಂಡಿದ್ದಾರೆ ಮತ್ತು ಕಾಂಗ್ರೆಸ್ ಸೇರುವ ಮನಸ್ಸು ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಈ ವಿಷಯ ಮತ್ತು ಮುಂಬರುವ ಪರಿಷತ್ ಚುನಾವಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಿರಿಯ ನಾಯಕರೊಂದಿಗೆ ಚರ್ಚಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಬೆಂಗಳೂರು: ಕಾವೇರಿ ನೀರು ನಿಯಂತ್ರಣಾ ಮಂಡಳಿ (CWRC) ತಮಿಳುನಾಡುಗೆ 18 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ಸ್ ನೀರು ಬಿಡುವಂತೆ ನೀಡಿರುವ ಆದೇಶವನ್ನು ಕರ್ನಾಟಕ ಸರ್ಕಾರ ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಮುಂದೆ ಪ್ರಶ್ನಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು ನೀರಿಗಾಗಿ ಸರ್ಕಾರದ ಪ್ರಯತ್ನ ಮುಂದುವರಿದಿರುವಂತೆಯೇ ವರುಣನ ಕೃಪೆಗೆ ಎಲ್ಲರೂ ಪ್ರಾರ್ಥಿಸಬೇಕು ಎಂದರು. ನಿನ್ನೆ ಹುಬ್ಬಳ್ಳಿಯಲ್ಲಿ ಕೆಲ ಕಾಂಗ್ರೆಸ್ಸೇತರ ಶಾಸಕರು ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರೊಂದಿಗೆ ಚರ್ಚೆ ನಡೆಸಿರುವ ಬಗ್ಗೆ ಕೇಳಿದಾಗ, ಶೆಟ್ಟರ್ ಅವರೊಂದಿಗೆ ಶಾಸಕರು ಮಾತಾಡಿರುವುದು ನಿಜ ಮತ್ತು ತಮ್ಮೊಂದಿಗೂ ಬಹಳಷ್ಟು ಶಾಸಕರು ಮಾತಾಡುತ್ತಿದ್ದಾರೆ ಎಂದರು. ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಎರಡೂ ಪಕ್ಷಗಳ ನಾಯಕರು ಅಸಮಾಧಾನಗೊಂಡಿದ್ದಾರೆ ಮತ್ತು ಕಾಂಗ್ರೆಸ್ ಸೇರುವ ಮನಸ್ಸು ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಈ ವಿಷಯ ಮತ್ತು ಮುಂಬರುವ ಪರಿಷತ್ ಚುನಾವಣೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಿರಿಯ ನಾಯಕರೊಂದಿಗೆ ಚರ್ಚಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ