ಮೆಟ್ರೋದಲ್ಲಿ ಪ್ರಯಾಣಿಸಿದ ಸಚಿವೆ ನಿರ್ಮಲಾ ಸೀತಾರಾಮನ್ ವಿಡಿಯೋ ಮತ್ತೆ ವೈರಲ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೆಹಲಿಯಲ್ಲಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿರುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮತ್ತೆ ಭಾರೀ ವೈರಲ್ ಆಗಿದೆ. 7ನೇ ಬಾರಿ ಬಜೆಟ್ ಮಂಡನೆಗೆ ನಿರ್ಮಲಾ ಸೀತಾರಾಮನ್ ಸಿದ್ಧವಾಗುತ್ತಿರುವ ಬೆನ್ನಲ್ಲೇ ಅವರ ಮೆಟ್ರೋ ಸವಾರಿಯ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಕಾರಣವಾಗಿದ್ದು, ಮೆಟ್ರೋದಲ್ಲಿ ನಿಂತುಕೊಂಡೇ ಪ್ರಯಾಣಿಸಿದ್ದಾರೆ.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) 7ನೇ ಬಾರಿಗೆ ಬಜೆಟ್ (Union Budget 2024) ಮಂಡಿಸಲು ಸಿದ್ಧರಾಗಿದ್ದಾರೆ. ಸತತ 6 ಬಜೆಟ್ ಮಂಡಿಸಿದ್ದ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಹಿಂದಿಕ್ಕುವ ಮೂಲಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ 7ನೇ ಬಾರಿ ಕೇಂದ್ರ ಬಜೆಟ್ ಮಂಡಿಸುವ ಮೊದಲ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ನಡುವೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ 10 ಸೆಕೆಂಡ್‌ಗಳ ಹಳೆಯ ವಿಡಿಯೋ ಕ್ಲಿಪ್ ಮತ್ತೆ ವೈರಲ್ ಆಗಿದೆ. ದೆಹಲಿಯ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿರುವ ನಿರ್ಮಲಾ ಸೀತಾರಾಮನ್ ನಿಂತುಕೊಂಡೇ ಪ್ರಯಾಣಿಸಿದ್ದಾರೆ. ಕುಳಿತಿದ್ದವರು ಅವರಿಗೆ ಸೀಟ್ ಬಿಟ್ಟುಕೊಟ್ಟಿಲ್ಲ. ಅವರ ಜೊತೆಗೆ ಭದ್ರತಾ ಸಿಬ್ಬಂದಿಯೂ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರ ಸರಳತೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

