ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಅಮಿತ್ ಶಾ ಭೇಟಿ

Updated on: Aug 08, 2026 | 10:51 PM

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿರುವಣ್ಣಾಮಲೈನಲ್ಲಿರುವ ಪ್ರಸಿದ್ಧ ಅರುಣಾಚಲೇಶ್ವರ ದೇವಸ್ಥಾನದಲ್ಲಿ ಶಿವನ ದರ್ಶನ ಪಡೆದರು. ದೇವಸ್ಥಾನಕ್ಕೆ ಭೇಟಿ ನೀಡಿದ ಅಮಿತ್ ಶಾ ಅವರನ್ನು ದೇವಾಲಯ ಆಡಳಿತ ಮಂಡಳಿ ಸ್ವಾಗತಿಸಿತು. ನಂತರ ಅವರು ಅರುಣಾಚಲೇಶ್ವರ ಮತ್ತು ಉನ್ನಮುಲೈ ಅಮ್ಮನ್ ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಚೆನ್ನೈ, ಆಗಸ್ಟ್ 8: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ತಮಿಳುನಾಡಿನ ತಿರುವಣ್ಣಾಮಲೈನಲ್ಲಿರುವ ಐತಿಹಾಸಿಕ ಅರುಣಾಚಲೇಶ್ವರ ದೇವಾಲಯಕ್ಕೆ (Arunachaleswarar Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಅರ್ಚಕರು ಮತ್ತು ದೇವಾಲಯದ ಆಡಳಿತ ಮಂಡಳಿಯು ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ ಕೋರಿತು. ಬಳಿಕ ಅವರು ಲಿಂಗರೂಪಿ ಶಿವನಿಗೆ (ಅರುಣಾಚಲೇಶ್ವರ) ವಿಶೇಷ ಅಭಿಷೇಕ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಿದರು. ಪ್ರಾರ್ಥನೆಯ ನಂತರ ಅಮಿತ್ ಶಾ ಅವರು ಅರುಣಾಚಲೇಶ್ವರ ದೇಗುಲದ ಆವರಣದಲ್ಲಿ ಹಾಗೂ ಸುತ್ತಮುತ್ತಲ ಪವಿತ್ರ ಸ್ಥಳಗಳಲ್ಲಿ ದರ್ಶನ ಪಡೆದರು.

ತಮಿಳುನಾಡು ಪ್ರವಾಸದ ಭಾಗವಾಗಿ ಆಗಮಿಸಿದ್ದ ಸಚಿವ ಅಮಿತ್ ಶಾ, ದೇವಾಲಯ ಭೇಟಿಯ ನಂತರ ಸ್ಥಳೀಯ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ, ರಾಜ್ಯದ ರಾಜಕೀಯ ಮತ್ತು ಭದ್ರತಾ ಪರಿಸ್ಥಿತಿಗಳ ಕುರಿತು ಚರ್ಚಿಸಿದರು. ಕೇಂದ್ರ ಗೃಹ ಸಚಿವರ ಭೇಟಿಯ ಹಿನ್ನೆಲೆಯಲ್ಲಿ ದೇವಾಲಯದ ಸುತ್ತಮುತ್ತ ಹಾಗೂ ತಿರುವಣ್ಣಾಮಲೈ ನಗರದಲ್ಲಿ ತಮಿಳುನಾಡು ಪೊಲೀಸರು ಮತ್ತು ಕೇಂದ್ರ ಭದ್ರತಾ ಪಡೆಗಳು ಅತ್ಯಂತ ಬಿಗಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದವು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More