ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ-ಇಲ್ಲಿದೆ ವಿಡಿಯೋ
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ನಂಜನಗೂಡು (Nanjangudu) ತಾಲೂಕಿನ ಸುತ್ತೂರಿನಲ್ಲಿ (Suttur Math) ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವಕ್ಕೂ ಭೇಟಿ ನೀಡಿದ್ದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ ಮೂರ್ತಿಯನ್ನು ನಿರ್ಮಿಸಿರುವ ಶಿಲ್ಪಿ ಅರುಣ ಯೋಗಿರಾಜ್ (Arun Yogiraj) ಅವರನ್ನು ಸನ್ಮಾನಿಸಿದರು. ಬಳಿಕ ಅಲ್ಲಿಂದ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.
ಮೈಸೂರು, ಫೆ.11: ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರುಶನ ಪಡೆದಿದ್ದಾರೆ. ಈ ವೇಳೆ ಅಮಿತ್ ಶಾಗೆ ದೇಗುಲದ ಆಡಳಿತ ಮಂಡಳಿಯಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ವಿಧಾನಸಭೆ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಶಾ ಭೇಟಿ ನೀಡಿದ್ದಾರೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಭೇಟಿ ನೀಡಿರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇನ್ನು ಇಂದು ನಂಜನಗೂಡು (Nanjangudu) ತಾಲೂಕಿನ ಸುತ್ತೂರಿನಲ್ಲಿ (Suttur Math) ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವಕ್ಕೂ ಭೇಟಿ ನೀಡಿದ್ದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ ಮೂರ್ತಿಯನ್ನು ನಿರ್ಮಿಸಿರುವ ಶಿಲ್ಪಿ ಅರುಣ ಯೋಗಿರಾಜ್ (Arun Yogiraj) ಅವರನ್ನು ಸನ್ಮಾನಿಸಿದರು. ಬಳಿಕ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅತಿಥಿಗೃಹ ಉದ್ಘಾಟಿಸಿ, ಅಲ್ಲಿಂದ ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾಥ್ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ