ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಅಹಮದಾಬಾದ್‌ನ ಕಟ್ಟಡವೊಂದರ ಮೇಲ್ಛಾವಣಿಯಿಂದ ಗಾಳಿಪಟ ಹಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಕರ ಸಂಕ್ರಾಂತಿಯ ದಿನವಾದ ಇಂದು ಗಾಳಿಪಟ ಹಾರಿಸುವ ಸಂಪ್ರದಾಯ ಹಲವು ಕಡೆಯಿದೆ. ಪ್ರತಿ ವರ್ಷ ಜನವರಿ 14ರಂದು ದೇಶಾದ್ಯಂತ ಆಚರಿಸಲಾಗುವ ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದು ಒಂದು ಸಂಪ್ರದಾಯವಾಗಿದೆ.
ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಆಚರಣೆಯ ಭಾಗವಾಗಿ ಗಾಳಿಪಟ ಹಾರಿಸಿದರು. ಅಮಿತ್ ಶಾ ಗುಜರಾತ್‌ನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಇದ್ದರು. ಅಹಮದಾಬಾದ್‌ನ ಶಾಂತಿನಿಕೇತನ ಸೊಸೈಟಿಯಲ್ಲಿ ಕಟ್ಟಡವೊಂದರ ಟೆರೇಸ್ನಿಂದ ಗಾಳಿಪಟ ಹಾರಿಸುವ ಮೂಲಕ ಅಮಿತ್ ಶಾ ಎಂಜಾಯ್ ಮಾಡಿದರು. ಪ್ರತಿ ವರ್ಷ ಜನವರಿ 14ರಂದು ದೇಶಾದ್ಯಂತ ಆಚರಿಸಲಾಗುವ ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದು ಒಂದು ಸಂಪ್ರದಾಯವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ