ಬೆಂಗಳೂರಿನಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿ ಲೈವ್
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ತಮ್ಮ ರಾಜ್ಯ ಪ್ರವಾಸದ ವೇಳೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಈ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಬಜೆಟ್‌ನ ಪ್ರಮುಖ ಅಂಶಗಳು ಮತ್ತು ಅದರ ರಾಜ್ಯದ ಮೇಲಿನ ಪರಿಣಾಮಗಳ ಬಗ್ಗೆ ಚರ್ಚಿಸಲಾಯಿತು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.
ಬೆಂಗಳೂರು, (ಫೆಬ್ರವರಿ 15): ಕೇಂದ್ರದ ನೂತನ ಬಜೆಟ್ (Union Budget 2025) ಕುರಿತ ವಿಶ್ಲೇಷಣೆ ಮತ್ತು ಚರ್ಚೆಗಳು ದೇಶಾದ್ಯಂತ ಎಲ್ಲ ಕಡೆ ನಡೆಯುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಎಲ್ಲ ಜಿಲ್ಲೆಗಳಲ್ಲಿ, ವಿಭಾಗ ಕೇಂದ್ರಗಳಲ್ಲಿ ಚರ್ಚೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ (Budget) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಅದರಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ನಿನ್ನೆ (ಫೆಬ್ರವರಿ 14) ರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಇಂದು (ಫೆಬ್ರವರಿ 15) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಜೆಟ್ ಕುರಿತು ಒಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಡಾ. ಸಿ.ಎನ್. ಮಂಜುನಾಥ್ ಮತ್ತು ಲೇಹರ್ ಸಿಂಗ್ ಸಿರೋಯಾ ಉಪಸ್ಥಿತಿ ಇದ್ದು, ಈ ಸುದ್ದಿಗೋಷ್ಠಿಯ ನೇರಪ್ರಸಾರ ಇಲ್ಲಿದೆ.