ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್

Updated on: Oct 01, 2026 | 10:54 PM

ರಾಜಸ್ಥಾನದ ಜೈಪುರದಲ್ಲಿ ಆಯೋಜಿಸಲಾದ ‘ಅಖಿಲ ಭಾರತ ಸಬ್-ಜೂನಿಯರ್ ಬ್ಯಾಡ್ಮಿಂಟನ್ ರ್ಯಾಂಕಿಂಗ್ ಟೂರ್ನಿ’ಯಲ್ಲಿ ಕೇಂದ್ರ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ರಾಜಸ್ಥಾನದ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಭಾಗವಹಿಸಿದ್ದರು. ಈ ವೇಳೆ ಇಬ್ಬರೂ ಸಚಿವರು ಬ್ಯಾಡ್ಮಿಂಟನ್ ಆಡಿ ಗಮನಸೆಳೆದರು. ನಾನು ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚಿಸಿದ್ದೇನೆ. ಕೇಂದ್ರದಿಂದ ಅಗತ್ಯ ನೆರವು ನೀಡುವಂತೆ ಅವರಿಗೆ ಮನವಿ ಮಾಡಿದ್ದು, ರಾಜಸ್ಥಾನ ಸರ್ಕಾರವೂ ತನ್ನ ಪಾಲು ನೀಡುವ ಮೂಲಕ ಈ ಕ್ರೀಡಾಂಗಣವನ್ನು ಸಂಪೂರ್ಣ ಹವಾನಿಯಂತ್ರಿತಗೊಳಿಸಲಿದ್ದೇವೆ ಹಾಗೂ ಇಲ್ಲಿ ಒಂದು ಸುಸಜ್ಜಿತ ಬ್ಯಾಡ್ಮಿಂಟನ್ ಅಕಾಡೆಮಿಯನ್ನು ಸ್ಥಾಪಿಸಲಿದ್ದೇವೆ.

ಜೈಪುರ, ಅಕ್ಟೋಬರ್ 1: ರಾಜಸ್ಥಾನದ ಜೈಪುರದಲ್ಲಿ ಆಯೋಜಿಸಲಾದ ‘ಅಖಿಲ ಭಾರತ ಸಬ್-ಜೂನಿಯರ್ ಬ್ಯಾಡ್ಮಿಂಟನ್ ರ್ಯಾಂಕಿಂಗ್ ಟೂರ್ನಿ’ಯಲ್ಲಿ ಕೇಂದ್ರ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ರಾಜಸ್ಥಾನದ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಭಾಗವಹಿಸಿದ್ದರು. ಈ ವೇಳೆ ಇಬ್ಬರೂ ಸಚಿವರು ಬ್ಯಾಡ್ಮಿಂಟನ್ ಆಡಿ ಗಮನಸೆಳೆದರು.

ಈ ವೇಳೆ ಮಾತನಾಡಿದ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್, “2014ರಿಂದ ಕ್ರೀಡಾ ಕ್ಷೇತ್ರದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಹೊಂದಿರುವ ದೂರದೃಷ್ಟಿ ಮತ್ತು ಗಮನವು ಈಗ ನೆಲಮಟ್ಟದಲ್ಲಿ ಸಾಕಾರಗೊಳ್ಳುತ್ತಿದೆ. ‘ಖೇಲೋ ಇಂಡಿಯಾ’ ಅಭಿಯಾನ ಇರಲಿ, ‘ಟಾರ್ಗೆಟ್ ಒಲಿಂಪಿಕ್ ಪೋಡಿಯಂ’ ಯೋಜನೆಯಿರಲಿ ಅಥವಾ ವಿವಿಧ ಕ್ರೀಡಾ ಒಕ್ಕೂಟಗಳಿಗೆ ನೀಡಲಾಗುತ್ತಿರುವ ಬೆಂಬಲವಿರಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಸಬ್-ಜೂನಿಯರ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ರಾಜಸ್ಥಾನದಲ್ಲಿ ನಡೆಯುತ್ತಿರುವುದು ನನಗೆ ಅತ್ಯಂತ ಸಂತಸ ತಂದಿದೆ. ಪ್ರಸ್ತುತ ಇರುವ ಕ್ರೀಡಾಂಗಣದ ಹಾಲ್‍ಗಳು ಉತ್ತಮವಾಗಿವೆ, ಆದರೂ ಇದರಲ್ಲಿ ಇನ್ನೂ ಹೆಚ್ಚಿನ ಸುಧಾರಣೆಗೆ ಅವಕಾಶವಿದೆ ಎಂದು ನಾನು ಭಾವಿಸುತ್ತೇನೆ. ಈ ಕ್ರೀಡಾಂಗಣದ ಸೌಲಭ್ಯವನ್ನು ಸಂಪೂರ್ಣವಾಗಿ ಹವಾನಿಯಂತ್ರಿತಗೊಳಿಸುವ ಬಗ್ಗೆ ನಾನು ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚಿಸಿದ್ದೇನೆ. ಕೇಂದ್ರದಿಂದ ಅಗತ್ಯ ನೆರವು ನೀಡುವಂತೆ ಅವರಿಗೆ ಮನವಿ ಮಾಡಿದ್ದು, ರಾಜಸ್ಥಾನ ಸರ್ಕಾರವೂ ತನ್ನ ಪಾಲು ನೀಡುವ ಮೂಲಕ ಈ ಕ್ರೀಡಾಂಗಣವನ್ನು ಸಂಪೂರ್ಣ ಹವಾನಿಯಂತ್ರಿತಗೊಳಿಸಲಿದ್ದೇವೆ ಹಾಗೂ ಇಲ್ಲಿ ಒಂದು ಸುಸಜ್ಜಿತ ಬ್ಯಾಡ್ಮಿಂಟನ್ ಅಕಾಡೆಮಿಯನ್ನು ಸ್ಥಾಪಿಸಲಿದ್ದೇವೆ” ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More