ಅಂತಾರಾಷ್ಟ್ರೀಯ ಯೋಗ ದಿನ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯೋಗಾಭ್ಯಾಸ
ಮಂಡ್ಯದ ಪಿಇಟಿ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಸಾರ್ವಜನಿಕರೊಂದಿಗೆ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಕಪಾಲಭಾತಿ ಮತ್ತು ಅನುಲೋಮ-ವಿಲೋಮ ಪ್ರಾಣಾಯಾಮ ಸೇರಿದಂತೆ ವಿವಿಧ ಯೋಗಾಸನಗಳನ್ನು ಈ ವೇಳೆ ಪ್ರದರ್ಶಿಸಲಾಯಿತು.
ಮಂಡ್ಯ, ಜೂನ್ 21: ನಗರದ ಪಿಇಟಿ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಬಳಿಕ ಸಾರ್ವಜನಿಕರೊಂದಿಗೆ ಕುಮಾರಸ್ವಾಮಿ ಅವರು ಸ್ವತಃ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಚಂದ್ರವನ ಆಶ್ರಯದ ತ್ರಿನೇತ್ರ ಶಿವಯೋಗಿ ಸ್ವಾಮೀಜಿ, ಡಿಸಿ ಡಾ.ಕುಮಾರ್ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಜಿಪಂ ಸಿಇಒ ನಂದಿನಿ ಸೇರಿ ಹಲವರು ಈ ವೇಳೆ ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 21, 2026 09:15 AM
Follow Us
