ಅಂತಾರಾಷ್ಟ್ರೀಯ ಯೋಗ ದಿನ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯೋಗಾಭ್ಯಾಸ

Edited By:

Updated on: Jun 21, 2026 | 9:17 AM

ಮಂಡ್ಯದ ಪಿಇಟಿ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಸಾರ್ವಜನಿಕರೊಂದಿಗೆ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಕಪಾಲಭಾತಿ ಮತ್ತು ಅನುಲೋಮ-ವಿಲೋಮ ಪ್ರಾಣಾಯಾಮ ಸೇರಿದಂತೆ ವಿವಿಧ ಯೋಗಾಸನಗಳನ್ನು ಈ ವೇಳೆ ಪ್ರದರ್ಶಿಸಲಾಯಿತು.

ಮಂಡ್ಯ, ಜೂನ್​​ 21: ನಗರದ ಪಿಇಟಿ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಚಾಲನೆ ನೀಡಿದರು. ಬಳಿಕ ಸಾರ್ವಜನಿಕರೊಂದಿಗೆ ಕುಮಾರಸ್ವಾಮಿ ಅವರು ಸ್ವತಃ ಯೋಗಾಭ್ಯಾಸದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಚಂದ್ರವನ ಆಶ್ರಯದ ತ್ರಿನೇತ್ರ ಶಿವಯೋಗಿ ಸ್ವಾಮೀಜಿ, ಡಿಸಿ ಡಾ.ಕುಮಾರ್ ಪೊಲೀಸ್​ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಜಿಪಂ ಸಿಇಒ ನಂದಿನಿ ಸೇರಿ ಹಲವರು ಈ ವೇಳೆ ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 21, 2026 09:15 AM
Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More