ಗಾಯಾಳುವಿಗೆ ನೆರವಾದ ಹೆಚ್.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವಿಕ್ರಂ ಎಂಬ ವ್ಯಕ್ತಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗಾಯಾಳುವನ್ನು ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಸೇರಿಸಿ, ತಕ್ಷಣ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಹೆಚ್ಡಿಕೆ ಸೂಚಿಸಿದ್ದು, ಅವರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು, ಏಪ್ರಿಲ್ 12: ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಕ್ಷಣ ಸ್ಪಂದಿಸಿ ಮಾನವೀಯ ನೆರವು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ, ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತವನ್ನು ಗಮನಿಸಿದ್ದಾರೆ. ಈ ಅಪಘಾತದಲ್ಲಿ ವಿಕ್ರಂ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸುಮಾರು ಅರ್ಧ ಗಂಟೆಯಿಂದ ರಸ್ತೆಯಲ್ಲೇ ಬಿದ್ದಿದ್ದರು. ಸಚಿವರು ಕೂಡಲೇ ಕಾರ್ಯಪ್ರವೃತ್ತರಾಗಿ, ಗಾಯಾಳುವನ್ನು ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಿದ್ದಾರೆ. ಅಲ್ಲದೆ, ಆಸ್ಪತ್ರೆಯ ವೈದ್ಯರಿಗೆ ದೂರವಾಣಿ ಕರೆ ಮಾಡಿ, ವಿಕ್ರಂಗೆ ತಕ್ಷಣವೇ ಸೂಕ್ತ ಮತ್ತು ತುರ್ತು ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ಕೇಂದ್ರ ಸಚಿವರ ಈ ಸಮಯೋಚಿತ ಮತ್ತು ಮಾನವೀಯ ಕಾರ್ಯವು ಸ್ಥಳೀಯರಿಂದ ಮತ್ತು ಸಾರ್ವಜನಿಕರಿಂದ ಪ್ರಶಂಸೆಗೊಳಗಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
