ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್​: ಕುಮಾರಸ್ವಾಮಿ ಶಾಕಿಂಗ್​ ಹೇಳಿಕೆ

ಬಸವರಾಜ ಹೊರಟ್ಟಿನ ಹೊಡೆಯಲು ಹೋಗಿದ್ದ ಜಮೀರ್​: ಕುಮಾರಸ್ವಾಮಿ ಶಾಕಿಂಗ್​ ಹೇಳಿಕೆ

ರಾಮ್​, ಮೈಸೂರು
| Updated By: ನಯನಾ ರಾಜೀವ್

Updated on:Nov 15, 2024 | 12:14 PM

ಬಸವರಾಜ ಹೊರಟ್ಟಿ ಒಮ್ಮೆ ನನ್ನನ್ನು ಆತ್ಮೀಯತೆಯಿಂದ ಏ ಕುಮಾರ ಎಂದು ಕರೆದಾಗ ಇದೇ ಜಮೀರ್ ಅವರನ್ನು ಹೊಡೆಯಲು ಹೋಗಿದ್ದರು ಎಂದು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಮೀರ್ ಅಹ್ಮದ್ ಅವರ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ನನ್ನ ಜಮೀರ್ ಆತ್ಮೀಯತೆ ಕೇವಲ ರಾಜಕೀಯವಾಗಿ ಮಾತ್ರ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಬಸವರಾಜ ಹೊರಟ್ಟಿ ಒಮ್ಮೆ ನನ್ನನ್ನು ಆತ್ಮೀಯತೆಯಿಂದ ‘ಏ ಕುಮಾರ’ ಎಂದು ಕರೆದಾಗ ಇದೇ ಜಮೀರ್ ಅವರನ್ನು ಹೊಡೆಯಲು ಹೋಗಿದ್ದರು ಎಂದು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜಮೀರ್ ಅಹ್ಮದ್ ಅವರ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ನನ್ನ ಜಮೀರ್ ಆತ್ಮೀಯತೆ ಕೇವಲ ರಾಜಕೀಯವಾಗಿ ಮಾತ್ರ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ತನ್ನ ಬಗ್ಗೆ ಕರಿಯಾ ಎನ್ನುವ ಪದ ಬಳಕೆ ಮಾಡಿದ್ದಕ್ಕೆ ಜಮೀರ್ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಾನು ಜಮೀರ್​ ಅವರನ್ನು ಕುಳ್ಳ ಎಂದು ಕರೆದಿಲ್ಲ
ನಾನು ಜಮೀರ್ ಅಹ್ಮದ್​​ರನ್ನು ಎಂದೂ ಕುಳ್ಳ ಎಂದು ಕರೆದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ತಾಯಿ ಚಾಮುಂಡೇಶ್ವರಿ ಮುಂದೆ ನಿಂತಿದ್ದೇನೆ ಸತ್ಯವನ್ನೇ ಹೇಳುತ್ತಿದ್ದೇನೆ ಎಂದರು. ಚನ್ನಪಟ್ಟಣದಲ್ಲಿ ಜನತೆಯ ಆಶೀರ್ವಾದವಿದೆ, ಉತ್ತಮವಾದ ರೀತಿಯಲ್ಲಿ ಗೆಲುವು ಸಾಧಿಸುತ್ತೇವೆ. ಜಮೀರ್ ಹೇಳಿಕೆಯಿಂದ ಯಾವ ವ್ಯತ್ಯಾಸವೂ ಆಗುವುದಿಲ್ಲ, ನಾವು ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನನಗೆ ಅವರು ಕುಳ್ಳ ಅಂತಾರೆ, ನಾನು ಕುಮಾರಸ್ವಾಮಿಗೆ ಪ್ರೀತಿಯಿಂದ ಕರಿಯ ಅಂತೇನೆ: ಸಚಿವ ಜಮೀರ್ ಸ್ಪಷ್ಟನೆ
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ‘ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ)’ ಎಂದು ಕರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಉಪ ಚುನಾವಣೆ ಹೊಸ್ತಿಲಲ್ಲಿ ಹೊಸ ವಿವಾದ ಹುಟ್ಟು ಹಾಕಿದೆ.

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರ ಭಾಷಣದಲ್ಲಿ ಮಾತನಾಡಿದ್ದ ಜಮೀರ್‌ ಅವರು, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ‘ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಡೇಂಜರ್‌’ ಎಂದು ಉರ್ದುವಿನಲ್ಲಿ ಟೀಕಿಸಿದ್ದರು.

ಮೊದಲಿನಿಂದಲೂ ಕುಮಾರಸ್ವಾಮಿಯವರು ನನ್ನನ್ನು ಕುಳ್ಳ ಅನ್ನುತ್ತಾರೆ. ನಾನು ಅವರನ್ನು ಕರಿಯಣ್ಣ ಎಂದು ಕರೆಯುತ್ತೇನೆ. ಕುಮಾರಸ್ವಾಮಿಯನ್ನು ನಾನು ಪ್ರೀತಿಯಿಂದ ಹಾಗೆ ಕರೆಯುತ್ತೇನೆಯೇ ಹೊರತು ಅದರ ಹಿಂದೆ ಯಾವುದೇ ದುರುದ್ದೇಶ ಇಲ್ಲ. ನಾವು ಬೇರೆ, ಬೇರೆ ಪಕ್ಷದಲ್ಲಿ ಇರಬಹುದು. ಆದರೆ, ಹಳೆಯ ಸ್ನೇಹವನ್ನು ಮರೆಯಲು ಸಾಧ್ಯವಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 15, 2024 12:08 PM