50 ಹಳ್ಳಿ ಜನರಿಗೆ ಭೂಮಿ ಹಿಂದಿರುಗಿಸಬೇಕು: ಆಂದೋಲನ ಘೋಷಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
ನೈಸ್ ರಸ್ತೆ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದ್ದು, ಇದೀಗ ಅಲ್ಲಿನ ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಪ್ರತಿಭಟನೆ ನಡೆದಿದ್ದು, ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ನಿಮ್ಮ ಪರವಾಗಿ ಧ್ವನಿ ಎತ್ತಲು ನಾನು ಸಿದ್ಧನಿದ್ದೇನೆ. ನಿಮ್ಮನ್ನು ದುರ್ಬಳಕೆ ಮಾಡಿಕೊಂಡು ನನಗೇನೂ ಆಗಬೇಕಾಗಿಲ್ಲ. ಈಗಾಗಲೇ ಆರೂವರೆ ಕೋಟಿ ಜನರ ಪ್ರೀತಿ ಸಂಪಾದನೆ ಮಾಡಿದ್ದೇನೆ ಎಂದರು.
ಬೆಂಗಳೂರು, (ಸೆಪ್ಟೆಂಬರ್ 27): ನೈಸ್ ರಸ್ತೆ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದ್ದು, ಇದೀಗ ಅಲ್ಲಿನ ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಪ್ರತಿಭಟನೆ ನಡೆದಿದ್ದು, ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ನಿಮ್ಮ ಪರವಾಗಿ ಧ್ವನಿ ಎತ್ತಲು ನಾನು ಸಿದ್ಧನಿದ್ದೇನೆ. ನಿಮ್ಮನ್ನು ದುರ್ಬಳಕೆ ಮಾಡಿಕೊಂಡು ನನಗೇನೂ ಆಗಬೇಕಾಗಿಲ್ಲ. ಈಗಾಗಲೇ ಆರೂವರೆ ಕೋಟಿ ಜನರ ಪ್ರೀತಿ ಸಂಪಾದನೆ ಮಾಡಿದ್ದೇನೆ ಎಂದರು.
ನಿಮ್ಮಂತ ಜನರ ಪರವಾಗಿ ಹೋರಾಟ ಮಾಡಲು ಬರುತ್ತಿದ್ದಾರೆ. ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಕಾರ್ಯಕ್ರಮ ಮಾಡುತ್ತೇನೆ. ಸುಮಾರು 50 ಹಳ್ಳಿ ಜನರಿಗೆ ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಮಾಡುತ್ತೇನೆ. ಇಲ್ಲಿಂದ ಎಲೆಕ್ಟ್ರಾನಿಕ್ಸಿಟಿವರೆಗೂ ಪ್ರವಾಸ ಮಾಡುತ್ತೇನೆಂದು ಘೋಷಣೆ ಮಾಡಿದ ಕುಮಾರಸ್ವಾಮಿ, ನಾನು ನಿಮಗೆ ಮಾತು ಕೊಟ್ಟು ಹೋಗುತ್ತಿದ್ದೇನೆ ಎಂದು ಹೇಳಿದರು.

