50 ಹಳ್ಳಿ ಜನರಿಗೆ ಭೂಮಿ ಹಿಂದಿರುಗಿಸಬೇಕು: ಆಂದೋಲನ ಘೋಷಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ

Updated on: Sep 27, 2026 | 4:54 PM

ನೈಸ್ ರಸ್ತೆ ಪೆರಿಫೆರಲ್‌ ರಿಂಗ್ ರೋಡ್‌ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದ್ದು, ಇದೀಗ ಅಲ್ಲಿನ ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಪ್ರತಿಭಟನೆ ನಡೆದಿದ್ದು, ಸ್ಥಳಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ನಿಮ್ಮ ಪರವಾಗಿ ಧ್ವನಿ ಎತ್ತಲು ನಾನು ಸಿದ್ಧನಿದ್ದೇನೆ. ನಿಮ್ಮನ್ನು ದುರ್ಬಳಕೆ ಮಾಡಿಕೊಂಡು ನನಗೇನೂ ಆಗಬೇಕಾಗಿಲ್ಲ. ಈಗಾಗಲೇ ಆರೂವರೆ ಕೋಟಿ ಜನರ ಪ್ರೀತಿ ಸಂಪಾದನೆ ಮಾಡಿದ್ದೇನೆ ಎಂದರು.

ಬೆಂಗಳೂರು, (ಸೆಪ್ಟೆಂಬರ್ 27): ನೈಸ್ ರಸ್ತೆ ಪೆರಿಫೆರಲ್‌ ರಿಂಗ್ ರೋಡ್‌ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದ್ದು, ಇದೀಗ ಅಲ್ಲಿನ ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಪ್ರತಿಭಟನೆ ನಡೆದಿದ್ದು, ಸ್ಥಳಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ನಿಮ್ಮ ಪರವಾಗಿ ಧ್ವನಿ ಎತ್ತಲು ನಾನು ಸಿದ್ಧನಿದ್ದೇನೆ. ನಿಮ್ಮನ್ನು ದುರ್ಬಳಕೆ ಮಾಡಿಕೊಂಡು ನನಗೇನೂ ಆಗಬೇಕಾಗಿಲ್ಲ. ಈಗಾಗಲೇ ಆರೂವರೆ ಕೋಟಿ ಜನರ ಪ್ರೀತಿ ಸಂಪಾದನೆ ಮಾಡಿದ್ದೇನೆ ಎಂದರು.

ನಿಮ್ಮಂತ ಜನರ ಪರವಾಗಿ ಹೋರಾಟ ಮಾಡಲು ಬರುತ್ತಿದ್ದಾರೆ. ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಕಾರ್ಯಕ್ರಮ ಮಾಡುತ್ತೇನೆ. ಸುಮಾರು 50 ಹಳ್ಳಿ ಜನರಿಗೆ ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಮಾಡುತ್ತೇನೆ. ಇಲ್ಲಿಂದ ಎಲೆಕ್ಟ್ರಾನಿಕ್​ಸಿಟಿವರೆಗೂ ಪ್ರವಾಸ ಮಾಡುತ್ತೇನೆಂದು ಘೋಷಣೆ ಮಾಡಿದ ಕುಮಾರಸ್ವಾಮಿ, ನಾನು ನಿಮಗೆ ಮಾತು ಕೊಟ್ಟು ಹೋಗುತ್ತಿದ್ದೇನೆ ಎಂದು ಹೇಳಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More