ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಶಬರಿಮಲೆ ಅಯ್ಯಪ್ಪ ಮಾಲೆ ಧರಿಸಿದ್ದಾರೆ. ಹಾಲಿ, ಮಾಜಿ ಶಾಸಕರು ಹಾಗೂ ಆಪ್ತರೊಂದಿಗೆ ಶಬರಿಮಲೆ ಯಾತ್ರೆ ಕೈಗೊಂಡಿರುವ ಅವರು, ಇಂದು ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳಿರುವ ಸಚಿವರು ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕದಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರು, ಜೂನ್ 15: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್ ನಗರದ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ ಸಚಿವರು, ನಂತರ ದೇಗುಲದಲ್ಲಿಯೇ ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆ ಹೊರಟಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಪಂಪಾ ನದಿ ತೀರವನ್ನು ತಲುಪಲಿರುವ ಸಚಿವರು ಮತ್ತು ತಂಡ ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ ಸಾಗಲಿದೆ. ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳಿರುವ ಸಚಿವರು, ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾದ ನಂತರ ಶಬರಿಮಲೆಗೆ ಕೈಗೊಂಡ ಮೊದಲ ಯಾತ್ರೆ ಇದಾಗಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಮಂತ್ರಿಗಳಾದ ಸಿ.ಎಸ್. ಪುಟ್ಟರಾಜು, ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡರ, ಶಾಸಕರಾದ ಶರಣಗೌಡ ಕಂದಕೂರ, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್, ಹೆಚ್.ಎಂ. ರಮೇಶ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಜನರ ತಂಡದೊಂದಿಗೆ ಹೆಚ್ಡಿಕೆ ಯಾತ್ರೆ ಕೈಗೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 15, 2026 10:33 AM
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್ಐಆರ್ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್ ದ್ರಾವಿಡ್ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
