AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಅಮ್ಮನ ಅಗಲುವಿಕೆ ನೆನೆದು ಹೆಚ್​.ಡಿ. ಕುಮಾರಸ್ವಾಮಿ ಭಾವುಕ

ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಅಮ್ಮನ ಅಗಲುವಿಕೆ ನೆನೆದು ಹೆಚ್​.ಡಿ. ಕುಮಾರಸ್ವಾಮಿ ಭಾವುಕ

Sunil MH
| Edited By: |

Updated on: Jul 19, 2026 | 9:20 AM

Share

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಮತ್ತು ತಮ್ಮ ತಾಯಿಯೂ ಆಗಿರುವ ಚೆನ್ನಮ್ಮ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಾಯಿ ತಮಗೆ ಕಲಿಸಿದ ಬದುಕಿನ ಪಾಠಗಳು ಮತ್ತು ಅವರ ಸರಳ ದಾಂಪತ್ಯ ಜೀವನವನ್ನು ನೆನೆದು ಅವರು ಭಾವುಕರಾದ ಪ್ರಸಂಗ ನಡೆದಿದೆ. ಇವತ್ತಿನ ಸಮಾಜಕ್ಕೆ ನಮ್ಮ ತಂದೆ ತಾಯಿಯ ದಾಂಪತ್ಯ ಮಾದರಿ ಎಂದೂ ಅವರು ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು, ಜುಲೈ 19: ತಾಯಿ ಚೆನ್ನಮ್ಮ ಎಲ್ಲ ಮಕ್ಕಳನ್ನು ಸಮಾನವಾಗಿ ಬೆಳೆಸಿದ್ದಾರೆಯಾದರೂ ನಾನೆಂದರೆ ಅವರಿಗೆ ತುಸು ಜಾಸ್ತಿ ಪ್ರೀತಿ ಇತ್ತು. ಅದೆಷ್ಟೋ ಬಾರಿ ಹೇಗೆ ಬದುಕಬೇಕೆಂದು ಅವರು ನನಗೆ ಹಿತವಚನ ನೀಡಿದ್ದ ದಿನಗಳನ್ನು ಮರೆಯಲು ಸಾಧ್ಯವಿಲ್ಲ ಎಂದು ಹೇಳುತ್ತಲೇ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ಭಾವುಕರಾದ ಪ್ರಸಂಗ ನಡೆದಿದೆ. ಹಲವು ಪಕ್ಷಗಳಲ್ಲಿ ಇರುವ ನಾಯಕರೆಲ್ಲ ನಮ್ಮಮನ ಹಾರೈಕೆಯಲ್ಲಿ ಬೆಳೆದವರೆ. ಹೀಗಾಗಿ ಅವರ ಬಗ್ಗೆ ಗೌರವ ಇಟ್ಟುಕೊಂಡು ಎಲ್ಲರೀ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇವತ್ತಿನ ಸಮಾಜಕ್ಕೆ ನಮ್ಮ ತಂದೆ ತಾಯಿಯ ದಾಂಪತ್ಯ ಮಾದರಿಯಾಗಿದೆ. ಗಂಡ ಪ್ರಧಾನಿ, ಮುಖ್ಯಮಂತ್ರಿಯಾದಗಲೂ ಅವರು ಮನೆಯಿಂದ ಹೊರ ಬಂದವರಲ್ಲ. ಅವರಾಯಿತು ಅವರ ದೇವರ ಮನೆಯಾಯಿತು ಎಂದು ಇದ್ದಂತವರು ಎಂದು ಕುಮಾರಸ್ವಾಮಿ ಈ ವೇಳೆ ನೆನಪಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us