ಟಾರ್ಗೆಟ್ ಯಾರು? ದೇಶವೇ ಅಲ್ಲೋಲ ಕಲ್ಲೋಲ ಆಗೋ ದಾಖಲೆ ಏನು? ಇಲ್ಲಿದೆ ವಿವರ
ಅಮೆರಿಕಾಕ್ಕೆ ಹೋಗುವ ಮುನ್ನವೇ ಕರ್ನಾಟಕ ಮಾತ್ರವಲ್ಲ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ. ಇದೀಗ ವಿದೇಶ ಪ್ರವಾಸದಿಂದ ಕುಮಾರಸ್ವಾಮಿ ವಾಪಾಸ್ ಆಗಿದ್ದು, ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯವನ್ನು ಯಾವಾಗ ಹೇಳುತ್ತಾರೆ ಎನ್ನುವ ಚರ್ಚೆ ಶುರುವಾಗಿದೆ. ಸೋಮವಾರ ಅಥವಾ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಕೆಲವೊಂದಿಷ್ಟು ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ ಎನ್ನುವುದು ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಎಲ್ಲರ ಚಿತ್ತ ಕುಮಾರಸ್ವಾಮಿಯವರ ಸುದ್ದಿಗೋಷ್ಠಿಯತ್ತ ನೆಟ್ಟಿದ್ದು, ಯಾರಿಗೆ ಸಂಬಂಧಿಸಿದ ಯಾವೆಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಬೆಂಗಳೂರು, (ಸೆಪ್ಟೆಂಬರ್ 13): ಅಮೆರಿಕಾಕ್ಕೆ ಹೋಗುವ ಮುನ್ನವೇ ಕರ್ನಾಟಕ ಮಾತ್ರವಲ್ಲ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ. ಇದೀಗ ವಿದೇಶ ಪ್ರವಾಸದಿಂದ ಕುಮಾರಸ್ವಾಮಿ ವಾಪಾಸ್ ಆಗಿದ್ದು, ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯವನ್ನು ಯಾವಾಗ ಹೇಳುತ್ತಾರೆ ಎನ್ನುವ ಚರ್ಚೆ ಶುರುವಾಗಿದೆ. ಸೋಮವಾರ ಅಥವಾ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಕೆಲವೊಂದಿಷ್ಟು ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ ಎನ್ನುವುದು ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಎಲ್ಲರ ಚಿತ್ತ ಕುಮಾರಸ್ವಾಮಿಯವರ ಸುದ್ದಿಗೋಷ್ಠಿಯತ್ತ ನೆಟ್ಟಿದ್ದು, ಯಾರಿಗೆ ಸಂಬಂಧಿಸಿದ ಯಾವೆಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

