ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಹೆಚ್ಡಿ ಕುಮಾರಸ್ವಾಮಿ ಗುಡ್ ನ್ಯೂಸ್
ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರ ದೇಗುಲಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಸಹೋದರ ಹೆಚ್ಡಿ ರೇವಣ್ಣ, ಶಾಸಕ ಸ್ವರೂಪ್ ಪ್ರಕಾಶ್ ಜೊತೆ ಆಗಮಿಸಿ ಪೂಜೆ ಸಲ್ಲಿಸಿದ ಅವರು, ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನದ ಬಗ್ಗೆಯೂ ಮಾತನಾಡಿದ್ದಾರೆ. ವಿವರಗಳು ವಿಡಿಯೋದಲ್ಲಿವೆ.
ಹಾಸನ, ಡಿಸೆಂಬರ್ 23: ಹಾಸನ ಜಿಲ್ಲೆಯ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ದೇವಾಲಯ ಹಾಗೂ ಹುಟ್ಟೂರು ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿದ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನ ವಿಚಾರವಾಗಿಯೂ ಮಾತನಾಡಿದರು.
ಭದ್ರಾವತಿ ಸೇರಿದಂತೆ ದೇಶದ ವಿವಿಧೆಡೆ ಇರುವ ಉಕ್ಕು ಕಾರ್ಖಾನೆಗಳ ಪುನಶ್ಚೇತನಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. 1.30 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಪುನಶ್ಚೇತನಕ್ಕೆ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಕುಮಾರಸ್ವಾಮಿ ಇನ್ನೂ ಏನೇನಂದರು ಎಂಬ ವಿಡಿಯೋ ಇಲ್ಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos