ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಹೆಚ್​ಡಿ ಕುಮಾರಸ್ವಾಮಿ ಗುಡ್ ನ್ಯೂಸ್

Edited By:

Updated on: Dec 23, 2024 | 2:52 PM

ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರ ದೇಗುಲಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಸಹೋದರ ಹೆಚ್​ಡಿ ರೇವಣ್ಣ, ಶಾಸಕ ಸ್ವರೂಪ್ ಪ್ರಕಾಶ್ ಜೊತೆ ಆಗಮಿಸಿ ಪೂಜೆ ಸಲ್ಲಿಸಿದ ಅವರು, ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನದ ಬಗ್ಗೆಯೂ ಮಾತನಾಡಿದ್ದಾರೆ. ವಿವರಗಳು ವಿಡಿಯೋದಲ್ಲಿವೆ.

ಹಾಸನ, ಡಿಸೆಂಬರ್ 23: ಹಾಸನ ಜಿಲ್ಲೆಯ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ದೇವಾಲಯ ಹಾಗೂ ಹುಟ್ಟೂರು ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿದ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಪುನಶ್ಚೇತನ ವಿಚಾರವಾಗಿಯೂ ಮಾತನಾಡಿದರು.

ಭದ್ರಾವತಿ ಸೇರಿದಂತೆ ದೇಶದ ವಿವಿಧೆಡೆ ಇರುವ ಉಕ್ಕು ಕಾರ್ಖಾನೆಗಳ ಪುನಶ್ಚೇತನಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. 1.30 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಪುನಶ್ಚೇತನಕ್ಕೆ ಯೋಜನೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಕುಮಾರಸ್ವಾಮಿ ಇನ್ನೂ ಏನೇನಂದರು ಎಂಬ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More