ಬಿಜೆಪಿ ನಾಯಕರ ಜೊತೆ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾದ ಹೆಚ್ ಡಿ ಕುಮಾರಸ್ವಾಮಿ
ರಾಜ್ಯದಲ್ಲಿ ಚನ್ನಪಟ್ಟಣ ಮತ್ತ್ತು ಇನ್ನೆರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳ ಫಲಿತಾಂಶ ಪ್ರಕಟಗೊಂಡ ನಂತರ ಕುಮಾರಸ್ವಾಮಿಯವರು ಸಾರ್ವಜನಿಕವಾಗಿ ಜಾಸ್ತಿ ಕಾಣಿಸಿಕೊಳ್ಳಲಿಲ್ಲ, ಹಾಗಾಗಿ ಬಿಜೆಪಿ ನಾಯಕರ ಜೊತೆ ಅವರು ವೇದಿಕೆ ಹಂಚಿಕೊಂಡ ಪ್ರಾಯಶಃ ಇದು ಮೊದಲ ಕಾರ್ಯಕ್ರಮ ಇರಬಹುದು. ಮಗನ ಸೋಲು ಅವರನ್ನು ಕೊಂಚ ವಿಚಲಿತಗೊಳಿಸಿದ್ದು ಸುಳ್ಳಲ್ಲ.
ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಆಯೋಜಿಸಲಾದ ಗುರು ಸಿದ್ಧರಾಮೇಶ್ವರ 852ನೇ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ಸಂಸದ ಗೋವಿಂದ ಕಾರಜೋಳ ಮತ್ತು ಬೇರೆ ಹಲವು ಬಿಜೆಪಿ ನಾಯಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದುದ್ದಕ್ಕೂ ವಿಜಯೇಂದ್ರ ಮತ್ತು ಕುಮಾರಸ್ವಾಮಿ ಗಹನವಾದ ಚರ್ಚೆಯಲ್ಲಿ ತೊಡಗಿದ್ದು ಗಮನ ಸೆಳೆಯಿತು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಆಪರೇಷನ್ ಹಸ್ತದ ಭೀತಿ; ಪಕ್ಷದ ಶಾಸಕ, ಮುಖಂಡರೊಡನೆ ಸಭೆ ನಡೆಸಿದ ದೇವೇಗೌಡ ಮತ್ತು ಕುಮಾರಸ್ವಾಮಿ