ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗನ ಸೋಲು ಕುಮಾರಸ್ವಾಮಿಯನ್ನು ಇನ್ನೂ ಕಾಡುತ್ತಿದೆ
ಕಾಂಗ್ರೆಸ್ನವರು ಮೇಕೆದಾಟು ಯೋಜನೆ ಬಗ್ಗೆ ಮಾತಾಡಿದ್ದಕ್ಕೆ ಅವರನ್ನು ಗೆಲ್ಲಿಸಿದಿರಿ, ಮೇಕೆದಾಟು ಯೋಜನೆ ಜಾರಿಯಾಯಿತಾ? ತಮಿಳುನಾಡಿನಲ್ಲಿ ಆಡಳಿತರೂಢ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ, ಆ ಸರ್ಕಾರದಿಂದ ಅನುಮೋದನೆ ಪಡೆದರೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತಾಡಿ ಹತ್ತು ನಿಮಿಷಗಳಲ್ಲಿ ಅನುಮತಿ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
ರಾಮನಗರ, ಮಾರ್ಚ್ 7 : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಅವರ ಮಗ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಜಿಲ್ಲೆಯ ಅಕ್ಕೂರಿನಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಅವರು, ತಾನು ಮತ್ತು ದೇವೇಗೌಡರು ರಾಮನಗರ ಜಿಲ್ಲೆಯ ಜನತೆಗೆ ಮಾಡಿದ ಅನ್ಯಾಯವಾದರೂ ಏನು ಎಂದು ಪ್ರಶ್ನಿಸಿದರು. ಅವರ ಮಾತಿನಲ್ಲಿ ಹತಾಷೆಯ ಛಾಯೆಯನ್ನು ಸ್ಪಷ್ಟವಾಗಿ ಗುರುತಿಸಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರೈತರಿಗೆ ಭೂಮಿಯನ್ನು ಸರ್ಕಾರ ಕೊಡಬೇಕು, ನಾನು ಹೇಗೆ ಕೊಡಲು ಸಾಧ್ಯ? ಹೆಚ್ ಡಿ ಕುಮಾರಸ್ವಾಮಿ
Published on: Mar 07, 2025 10:16 AM