ಬೆಂಗಳೂರಲ್ಲಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ‘ಸೇವಾ ಸಂಕಲ್ಪ’ ಅಭಿಯಾನದ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆಯ ಬದ್ಧತೆಯನ್ನು ಶ್ಲಾಘಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್ ಸೇರಿ ಹಲವರು ಭಾಗಿಯಾಗಿದ್ದರು.
ಬೆಂಗಳೂರು, ಸೆಪ್ಟೆಂಬರ್ 15: ಬೆಂಗಳೂರಿನಲ್ಲಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಪಿ.ಸಿ. ಮೋಹನ್, ಡಾ.ಸಿ.ಎನ್.ಮಂಜುನಾಥ್, ಶಾಸಕರಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಭಾಗಿಯಾಗಿದ್ದರು. ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ವಿಜಯ ಸೇರಿದಂತೆ ಸೇವಾ ಸಂಕಲ್ಪ ಅಭಿಯಾನದ ಕುರಿತಾಗಿ ನಡ್ಡಾ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 15, 2026 03:55 PM
Loading...
Unable to load recommendations.
Follow Us
