Video: ವೋಟ್ ಚೋರಿಯಾಗಿಲ್ಲ, ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ವೋಟ್ ಚೋರಿಯಾಗಿಲ್ಲ, ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದು ಕೇಂದ್ರ ಸಚಿವ, ಸಂಸದ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಮತಗಳ್ಳತನದ ವಿರುದ್ಧ ಕಾಂಗ್ರೆಸ್ ದೆಹಲಿಯಲ್ಲಿ ನಡೆಸಿರುವ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಕಾಂಗ್ರೆಸ್ ಪಕ್ಷದಲ್ಲಿ ಎಸ್ಐಆರ್ ನಡೆಸಬೇಕು, ಇದು ನಡೆಯುವವರೆಗೂ ಯಾವುದನ್ನೂ ಸರಿಪಡಿಸಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಮತ್ತು ಅವರ ಬೆಂಬಲಿಗರ ಮೆದುಳು ಕಳ್ಳತನವಾಗಿದೆ ಎಂದು ವ್ಯಂಗ್ಯವಾಡಿದರು.
ನವದೆಹಲಿ, ಡಿಸೆಂಬರ್ 15: ವೋಟ್ ಚೋರಿಯಾಗಿಲ್ಲ, ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದು ಕೇಂದ್ರ ಸಚಿವ, ಸಂಸದ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಮತಗಳ್ಳತನದ ವಿರುದ್ಧ ಕಾಂಗ್ರೆಸ್ ದೆಹಲಿಯಲ್ಲಿ ನಡೆಸಿರುವ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ ಬಗ್ಗೆ ಪ್ರತಿಕ್ರಿಯಿಸಿದ ಜೋಶಿ, ಕಾಂಗ್ರೆಸ್ ಪಕ್ಷದಲ್ಲಿ ಎಸ್ಐಆರ್ ನಡೆಸಬೇಕು, ಇದು ನಡೆಯುವವರೆಗೂ ಯಾವುದನ್ನೂ ಸರಿಪಡಿಸಲು ಸಾಧ್ಯವಿಲ್ಲ. ಮತಗಳ್ಳತನ ನಡೆದಿಲ್ಲ ರಾಹುಲ್ ಗಾಂಧಿ ಮತ್ತು ಅವರ ಬೆಂಬಲಿಗರ ಮೆದುಳು ಕಳ್ಳತನವಾಗಿದೆ ಎಂದು ವ್ಯಂಗ್ಯವಾಡಿದರು.
ದೇಶಾದ್ಯಂತ ಬಿಜೆಪಿಯಿಂದ ಮತಗಳವು ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ‘ವೋಟ್ ಚೋರಿ’ ವಿರುದ್ಧ ಕಾಂಗ್ರೆಸ್ ಬೃಹತ್ ಕಹಳೆ ಮೊಳಗಿಸಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆದಿದ್ದು, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ಸಚಿವರು, ಶಾಸಕರು ಭಾಗವಹಿಸಿದ್ದಾರೆ. ಈ ಎರಡು ದಿನಗಳ ಅವಧಿಯಲ್ಲಿ ಸೋನಿಯಗಾಂಧಿ ಭೇಟಿಗೂ ಪ್ರಯತ್ನ ಸಾಧ್ಯತೆ ಇದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

