ಕೆಪಿಎಸ್‌ಸಿ ವಿವಾದದ ಅಧಿಕಾರಿಗೆ ಹಾಸನದಲ್ಲಿ ರಕ್ಷಣೆ ಕೊಟ್ರು: ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದ ಹೆಚ್​​ಡಿಕೆ

Edited By:

Updated on: Oct 10, 2026 | 8:51 PM

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲಾ ಮಂತ್ರಿ ಮತ್ತು ಜಿಲ್ಲಾಧಿಕಾರಿ ನಡುವಿನ ಸಂಘರ್ಷದ ಕುರಿತು ಮಾತನಾಡಿದ ಅವರು, ಅಧಿಕಾರಿಗಳ ನಿಯಂತ್ರಣ ಮತ್ತು ಸಮನ್ವಯದ ಕೊರತೆಯನ್ನು ಪ್ರಶ್ನಿಸಿದ್ದಾರೆ. ಲತಾ ಕುಮಾರಿ ಅವರ ಹಿಂದಿನ ಕೆಪಿಎಸ್‌ಸಿ ವಿವಾದವನ್ನು ಉಲ್ಲೇಖಿಸಿ, ಅವರನ್ನು ರಜೆ ಮೇಲೆ ಕಳುಹಿಸಬೇಕಿತ್ತು ಅಥವಾ ಅಮಾನತುಗೊಳಿಸಬೇಕಿತ್ತು ಎಂದು ಹೇಳಿದ್ದಾರೆ.

ಹಾಸನ, ಅ.10: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರ ಆಡಳಿತ ವೈಖರಿ ಮತ್ತು ಜಿಲ್ಲಾಡಳಿತದಲ್ಲಿನ ಸಂಘರ್ಷದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾ ಮಂತ್ರಿ ಮತ್ತು ಜಿಲ್ಲಾಧಿಕಾರಿ ನಡುವೆ ಸಂಘರ್ಷ ಶುರುವಾಗಿರುವ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಅಧಿಕಾರಿಗಳನ್ನು ಯಾವ ರೀತಿ ನಿಯಂತ್ರಣದಲ್ಲಿ ಇಟ್ಟುಕೊಂಡಿದ್ದೀರಿ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಸಮನ್ವಯತೆಯನ್ನು ನಿರ್ಮಾಣ ಮಾಡಿ ಅಧಿಕಾರ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಡಿಸಿ ಲತಾ ಕುಮಾರಿ ಅವರ ಹಿಂದಿನ ಕೆಪಿಎಸ್‌ಸಿ ವಿವಾದವನ್ನು ಉಲ್ಲೇಖಿಸಿದ ಅವರು, “ಆ ಹೆಣ್ಣುಮಗಳು ಕೆಪಿಎಸ್‌ಸಿಯಲ್ಲಿ ಏನು ಮಾಡಿದ್ದರು? ಅವರನ್ನು ರಜೆ ಮೇಲೆ ಕಳುಹಿಸಬೇಕಿತ್ತು, ಇಲ್ಲವೇ ಅಮಾನತುಗೊಳಿಸಬೇಕಿತ್ತು. ಇಲ್ಲಿ ಕರೆತಂದು ಆ ಜಿಲ್ಲಾಧಿಕಾರಿಗೆ ರಕ್ಷಣೆ ಕೊಟ್ಟಿದ್ದಾರೆ” ಎಂದು ಆರೋಪಿಸಿದರು. ಪತ್ರಿಕೆಗಳಲ್ಲಿ ಈ ಸಂಘರ್ಷದ ಸುದ್ದಿಗಳು ಬರುತ್ತಿರುವ ಬಗ್ಗೆ ಗಮನ ಸೆಳೆದ ಅವರು, ಅಧಿಕಾರಿಗಳು ಯಾವ ರೀತಿ ವರ್ತಿಸುತ್ತಿದ್ದಾರೆ ಎಂಬುದನ್ನು ಪ್ರಶ್ನಿಸಿದ್ದಾರೆ. “ಇವತ್ತು ಆ ಮಂತ್ರಿ, ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿ ನಡುವೆ ಸಂಘರ್ಷ ನಡೆಯುತ್ತಿದೆ ಎಂದರೆ, ಇವರು ಯಾವ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಮನ್ವಯವನ್ನು ಏರ್ಪಾಡು ಮಾಡಿ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದ್ದಾರೆ. ಈ ಪರಿಸ್ಥಿತಿಯನ್ನು ಸರಿಪಡಿಸದಿದ್ದರೆ, “ನಾಡಿನ ಜನ ದಂಗೆ ಏಳತಕ್ಕಂತದ್ದು ದೂರ ಇಲ್ಲ. ಎಚ್ಚರಿಕೆಯಿಂದ ಕೆಲಸ ಮಾಡಿ” ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 10, 2026 08:51 PM
Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More