ಚನ್ನಪಟ್ಟಣದಲ್ಲಿ ಮಣ್ಣಿನ ಮಗ ಕುಮಾರಸ್ವಾಮಿಯಿಂದ ಎತ್ತಿನ ಗಾಡಿಯಲ್ಲಿ ಪ್ರಚಾರ

ಅರುಣ್​ ಕುಮಾರ್​ ಬೆಳ್ಳಿ

Updated on: Oct 31, 2024 | 2:13 PM

ಕುಮಾರಸ್ವಾಮಿ ಜೊತೆ ಮತಬೇಟೆಗೆ ಇವತ್ತು ಮಾಜಿ ಸಚಿವ ಬಿಸಿ ಪಾಟೀಲ್ ಅಗಮಿಸಿದ್ದರು. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬೇರೆ ಕಡೆ ಪ್ರಚಾರಕ್ಕೆ ತೆರಳಿದ್ದರೇ ಅಥವಾ ಮನೆಯಲ್ಲಿ ಉಳಿದು ದೀಪಾವಳಿ ಹಬ್ಬ ಆಚರಿಸುತ್ತಿದ್ದಾರೆಯೇ ಅಂತ ಗೊತ್ತಾಗಲಿಲ್ಲ. ಪ್ರಚಾರದ ಭಾರವನ್ನು ಅವರು ತಮ್ಮ ತಂದೆಯ ಹೆಗಲಿಗೆ ಹೊರೆಸಿದಂತಿದೆ.

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ತಾನೇ ಅಭ್ಯರ್ಥಿಯೆಂಬಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರಚಾರ ಮಾಡುತ್ತಿದ್ದಾರೆ. ಮಣ್ಣಿನ ಮಗ, ರೈತನ ಮಗ ಎಂದು ಹೇಳಿಕೊಳ್ಳುವ ಅವರು ಕ್ಷೇತ್ರದ ತಿಟ್ಟಮಾರನಹಳ್ಳಿಯಲ್ಲಿ ಇಂದು ಎತ್ತಿನಗಾಡಿಯಲ್ಲಿ ಪ್ರಚಾರ ಮಾಡಿದರು. ಗ್ರಾಮದ ಮಹಿಳೆಯರು ಕುಮಾರಸ್ವಮಿಗೆ ಬೆಲ್ಲದ ಅರತಿ ಬೆಳಗಿ ಬರಮಾಡಿಕೊಂಡರು. ಎತ್ತಿನಗಾಡಿಯಲ್ಲಿ ನಿಂತು ಜನರಿಗೆ ಎರಡೂ ಕೈ ಜೋಡಿಸುತ್ತಾ ಅವರು ಮತ ಯಾಚಿಸಿದರು. ಬಸ್ಸುಗಳಲ್ಲಿದ್ದ ಜನ ಸಹ ಅವರತ್ತ ಕೈಬೀಸಿ ಹರ್ಷ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗದಿದ್ದರೆ ಸಾಕು: ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.