ಬೆಂಗಳೂರಿನಲ್ಲಿ ನಿರ್ಮಲಾ ಸೀತಾರಾಮನ್, ವಿಜಯೇಂದ್ರ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ

ಬೆಂಗಳೂರಿನಲ್ಲಿ ನಿರ್ಮಲಾ ಸೀತಾರಾಮನ್, ವಿಜಯೇಂದ್ರ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ

ರಮೇಶ್ ಬಿ. ಜವಳಗೇರಾ
|

Updated on: Jul 28, 2024 | 12:46 PM

ಬಜೆಟ್​ ಬಳಿಕ ಬೆಂಗಳೂರಿಗೆ ಆಗಮನಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಕೇಂದ್ರ ಬಜೆಟ್​ ಬಗ್ಗೆ ಮಾಹತಿ ಹಂಚಿಕೊಂಡಿದ್ದಾರೆ. ಹಾಗಾದ್ರೆ, ಏನೆಲ್ಲಾ ಹೇಳುತ್ತಿದ್ದಾರೆ ಎನ್ನುವುದನ್ನು ನೇರಪ್ರಸಾರದಲ್ಲಿ ನೋಡಿ

ಬೆಂಗಳೂರು, ಜುಲೈ 28): ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಇನ್ನು ಬಜೆಟ್​ನಲ್ಲಿ ಕರ್ನಾಟಕ್ಕೆ ಏನು ಕೊಟ್ಟಿಲ್ಲ ಎನ್ನುವ ಆರೋಪಗಳು ಕೇಳಿಬಂದಿವೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್​ ಅವರು ರಾಜ್ಯಕ್ಕೆ ಮೋಸ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರ ಆರೋಪಿಸಿದ್ದಾರೆ. ಇನ್ನು ಬಜೆಟ್​ ಬಳಿಕ ಬೆಂಗಳೂರಿಗೆ ಆಗಮನಿಸಿರುವ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಕೇಂದ್ರ ಬಜೆಟ್​ ಬಗ್ಗೆ ಮಾಹತಿ ಹಂಚಿಕೊಂಡಿದ್ದಾರೆ.