Mysuru Dasara Mahotsav-2024: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಹೆಚ್ ಡಿ ಕುಮಾರಸ್ವಾಮಿ

Updated on: Oct 11, 2024 | 10:30 AM

Mysuru Dasara Mahotsav-2024: ಪೂಜೆ ಮತ್ತು ಮಹಾ ಮಂಗಳಾರತಿಯ ನಂತರ ಚಾಮುಂಡಿ ದೇವಸ್ಥಾನದ ಪ್ರಧಾನ ಅರ್ಚಕ ಡಾ ಎನ್ ಶಶಿಶೇಖರ್ ದೀಕ್ಷಿತ್ ಅವರು ಕುಮಾರಸ್ವಾಮಿಗೆ ಹಾರ ಹಾಕಿ, ಶಾಲು ಹೊದೆಸಿ ಸನ್ಮಾನಿಸಿದರು. ಕೇಂದ್ರ ಸಚಿವ ನಿನ್ನೆ ರಾಮನಗರದ ಚನ್ನಪಟ್ಟಣಕ್ಕೆ ಭೇಟಿ ನೀಡಿದ್ದರು.

ಮೈಸೂರು: ನಾಡಹಬ್ಬ ದಸರಾ ಪ್ರಯುಕ್ತ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆಯೇ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ತಾಯಿಗೆ ಪೂಜೆ ಸಲ್ಲಿಸಿದರು. ತಮ್ಮ ಪರವಾಗಿ ಅರ್ಚಕರು ಪೂಜೆ ಸಲ್ಲಿಸುವಾಗ ಕುಮಾರಸ್ವಾಮಿ ದೇವಿಯ ಮುಂದೆ ಕೈಕಟ್ಟಿಕೊಂಡು ವಿನೀತರಾಗಿ ನಿಂತಿದ್ದರು. ಜೆಡಿಎಸ್ ಶಾಸಕ ಹರೀಶ್ ಗೌಡ ಮತ್ತು ಪಕ್ಷದ ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಸಚಿವರ ಜೊತೆಗಿರುವುದನ್ನು ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Mysuru Dasara Mahotsav-2024: ಜಂಬೂ ಸವಾರಿಗೆ 3-ದಿನ ಬಾಕಿ, ಪುಷ್ಪಾರ್ಚನೆ ರಿಹರ್ಸಲ್​​ನಲ್ಲಿ ಆನೆಗಳು ಭಾಗಿ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More