ಮೂರು DCM ಹುದ್ದೆ ಸೃಷ್ಟಿ ಹಿಂದೆ ಸಿಎಂ ಇದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ
ಸಿಎಂ ಸಿದ್ದರಾಮಯ್ಯ(Siddaramaiah) ಪಕ್ಷದಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಹೇಳಿದ್ದಾರೆ. ಹುಬ್ಬಳ್ಳಿ(Hubballi)ಯಲ್ಲಿ ಮಾತನಾಡಿದ ಅವರು ‘ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದರ ಹಿಂದೆ ಸಿಎಂ ಇದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿ, ನ.12: ಸಿಎಂ ಸಿದ್ದರಾಮಯ್ಯ(Siddaramaiah) ಪಕ್ಷದಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಹೇಳಿದ್ದಾರೆ. ಹುಬ್ಬಳ್ಳಿ(Hubballi)ಯಲ್ಲಿ ಮಾತನಾಡಿದ ಅವರು ‘ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬುದರ ಹಿಂದೆ ಸಿಎಂ ಇದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ. ಇನ್ನು ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಅಧೋಗತಿಗೆ ತಲುಪಿದೆ. ಬಿಜೆಪಿಯವರು ಸರ್ಕಾರವನ್ನು ಬೀಳಿಸುತ್ತಾರೆಂದು ಹೇಳುತ್ತಿದ್ದೀರಿ, ನಾನು ಆತ್ಯಂತ ಪ್ರಮಾಣಿಕವಾಗಿ ಹೇಳುತ್ತೇನೆ, ಅಂತಹ ಯಾವುದೇ ಕಾರ್ಯಕ್ಕೆ ಬಿಜೆಪಿ ಕೈಹಾಕುವುದಿಲ್ಲ. ರಾಜ್ಯದಲ್ಲಿ ಜನರಿಗೆ ಉತ್ತಮ ಆಡಳಿತ ನೀಡಲಿ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Nov 12, 2023 05:13 PM