ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ ಪ್ರಯುಕ್ತ ಬಿಜೆಪಿ ನಾಯಕರು ಬುಧವಾರ ಬೆಂಗಳೂರಿನಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಇತರ ನಾಯಕರು ಪೊರಕೆ ಹಿಡಿದು ಕಸ ಗುಡಿಸಿದರು. ವಿಡಿಯೋ ಇಲ್ಲಿದೆ.
ಬೆಂಗಳೂರು, ಅಕ್ಟೋಬರ್ 2: ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕ ಬಿಜೆಪಿ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದರಾದ ಪಿ.ಸಿ. ಮೋಹನ್, ಕೋಟ ಶ್ರೀನಿವಾಸ ಪೂಜಾರಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಉಪಸ್ಥಿತರಿದ್ದರು. ನಂತರ ಬಿಜೆಪಿ ನಾಯಕರಿಂದ ಸ್ವಚ್ಛತಾ ಕಾರ್ಯ ನೆರವೇರಿತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಬಿಜೆಪಿ ನಾಯಕರು ಪೊರಕೆ ಹಿಡಿದು ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos