AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pahalgam Attack: ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

Pahalgam Attack: ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಸುಷ್ಮಾ ಚಕ್ರೆ
|

Updated on: Apr 22, 2025 | 10:28 PM

ಶಾಂತಿ ಕೆಡಿಸಲು ಹಾಗೂ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗರ ಆಕರ್ಷಣೀಯ ತಾಣದಲ್ಲಿ‌ ಆತಂಕ ನಿರ್ಮಾಣ ಮಾಡಲು ಉಗ್ರರು ದಾಳಿ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ. ಈ‌ ದುರಂತದಲ್ಲಿ ಮೃತಪಟ್ಟವರ‌ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಅವರ ಕುಟುಂಬಗಳಿಗೆ ಶಕ್ತಿ ನೀಡಲು ನಾನು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ನವದೆಹಲಿ, ಏಪ್ರಿಲ್ 22: ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorists Attack) ಇಂದು ನಡೆದ ಭಯೋತ್ಪಾದಕ ದಾಳಿ ತೀರ ಆಘಾತಕಾರಿ. ಅತ್ಯಂತ ಪ್ರವಾಸಿಗರ‌ ಆಕರ್ಷಕ ಸ್ಥಳದಲ್ಲಿ ಇಂದು ಮಧ್ಯಾಹ್ನ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ವೇಳೆ ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಮಂಜುನಾಥ ರಾವ್ ಮೃತ ಪಟ್ಟಿರೋದು ದುರದೃಷ್ಟಕರ. ಮೃತರ ಪಾರ್ಥಿವ ಶರೀರ ರವಾನೆಗೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ. ಈ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಉಗ್ರರ ದಾಳಿಯ ಕುರಿತು ಈಗಾಗಲೇ ಪ್ರಧಾನ ಮಂತ್ರಿ ನರೇಂದ್ರ ‌ಮೋದಿಯವರು ಕೇಂದ್ರ ಗೃಹ ಸಚಿವರಿಂದ ಮಾಹಿತಿ ಪಡೆದಿದ್ದು, ಪ್ರವಾಸಿ ತಾಣದಲ್ಲಿ ಸಿಲುಕಿರುವವರ ರಕ್ಷಣೆ ಹಾಗೂ ಪರಿಸ್ಥಿತಿ ಹತೋಟಿಗೆ ತರಲು ಸೂಚನೆ ನೀಡಿದ್ದಾರೆ. ಈಗಾಗಲೇ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಶ್ರೀನಗರಕ್ಕೆ ತೆರಳಿದ್ದಾರೆ. ಶಾಂತಿ ಕೆಡಿಸಲು ಹಾಗೂ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗರ ಆಕರ್ಷಣೀಯ ತಾಣದಲ್ಲಿ‌ ಆತಂಕ ನಿರ್ಮಾಣ ಮಾಡಲು ಉಗ್ರರು ದಾಳಿ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಾಗುತ್ತದೆ. ಈ‌ ದುರಂತದಲ್ಲಿ ಮೃತಪಟ್ಟವರ‌ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಅವರ ಕುಟುಂಬಗಳಿಗೆ ಶಕ್ತಿ ನೀಡಲು ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ