‘ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ’; ಕಾಂಗ್ರೆಸ್​​ಗೆ ಪ್ರಲ್ಹಾದ್ ಜೋಶಿ ತಿರುಗೇಟು

Edited By:

Updated on: Sep 17, 2026 | 9:22 PM

ಯುಪಿಐ ವ್ಯವಸ್ಥೆ ಜಾರಿಗೆ ತರಲು ಮತ್ತು ಅದನ್ನು ಜನರಿಗೆ ಅಭ್ಯಾಸ ಮಾಡಿಸಲು ಸರ್ಕಾರ ಸಾವಿರಾರು ಕೋಟಿ ರೂ.ಗಳನ್ನು ಹೂಡಿಕೆ ಮಾಡಿದೆ ಎಂದು ಅವರು ಸ್ಪಷ್ಟಪಡಿಸಿದರು. ಡಿಜಿಟಲ್ ವಹಿವಾಟುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಗಳು ಆಧಾರರಹಿತ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಯುಪಿಐ ವಹಿವಾಟುಗಳಲ್ಲಿ ವಿಧಿಸಲಾಗುವ ಶುಲ್ಕದ ಬಗ್ಗೆ ಮಾತನಾಡಿದ ಅವರು, 2000 ರೂ.ವರೆಗಿನ ವಹಿವಾಟುಗಳಿಗೆ ಮತ್ತು ಬೀದಿಬದಿ ವ್ಯಾಪಾರಸ್ಥರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಕೇವಲ 0.04% ಶುಲ್ಕವು ದೊಡ್ಡ ಪ್ರಮಾಣದ ವಹಿವಾಟುಗಳನ್ನು ನಡೆಸುವ ವ್ಯಾಪಾರಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇದರಿಂದ 96% ವಹಿವಾಟುದಾರರಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿ, ಸೆಪ್ಟೆಂಬರ್ 17: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯ ಕುರಿತು ಕಾಂಗ್ರೆಸ್ ಪಕ್ಷದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಯುಪಿಐ ವ್ಯವಸ್ಥೆ ಜಾರಿಗೆ ತರಲು ಮತ್ತು ಅದನ್ನು ಜನರಿಗೆ ಅಭ್ಯಾಸ ಮಾಡಿಸಲು ಸರ್ಕಾರ ಸಾವಿರಾರು ಕೋಟಿ ರೂ.ಗಳನ್ನು ಹೂಡಿಕೆ ಮಾಡಿದೆ ಎಂದು ಅವರು ಸ್ಪಷ್ಟಪಡಿಸಿದರು. ಡಿಜಿಟಲ್ ವಹಿವಾಟುಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಗಳು ಆಧಾರರಹಿತ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಯುಪಿಐ ವಹಿವಾಟುಗಳಲ್ಲಿ ವಿಧಿಸಲಾಗುವ ಶುಲ್ಕದ ಬಗ್ಗೆ ಮಾತನಾಡಿದ ಅವರು, 2000 ರೂ.ವರೆಗಿನ ವಹಿವಾಟುಗಳಿಗೆ ಮತ್ತು ಬೀದಿಬದಿ ವ್ಯಾಪಾರಸ್ಥರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಕೇವಲ 0.04% ಶುಲ್ಕವು ದೊಡ್ಡ ಪ್ರಮಾಣದ ವಹಿವಾಟುಗಳನ್ನು ನಡೆಸುವ ವ್ಯಾಪಾರಿಗಳಿಗೆ ಮಾತ್ರ ಅನ್ವಯಿಸುತ್ತದೆ. ಇದರಿಂದ 96% ವಹಿವಾಟುದಾರರಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
TV9 Web

TV9 Kannada

Read More