ನೀಟ್ ಪ್ರತಿಭಟನೆ, ಪ್ರಧಾನಿ ಮೋದಿ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ

Updated on: Jul 24, 2026 | 1:04 PM

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೀಟ್ ಪರೀಕ್ಷಾ ಅಕ್ರಮದ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಮತ್ತು ವಿರೋಧ ಪಕ್ಷಗಳ ಟೀಕೆಗೆ ಉತ್ತರಿಸಿದ ಅವರು, 2024ರ ಪರೀಕ್ಷಾ ಕಾಯಿದೆ ಮತ್ತು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ಸರ್ಕಾರವು ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು. ಹಿಂದಿನ ಲೀಕ್‌ಗಳ ಕುರಿತು ಉಲ್ಲೇಖಿಸಿ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು.

ಬೆಂಗಳೂರು, ಜುಲೈ 24: ನೀಟ್ ಪರೀಕ್ಷಾ ಅಕ್ರಮ ಮತ್ತು ವಿರೋಧ ಪಕ್ಷಗಳ ಟೀಕೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಕೇಂದ್ರ ಸರ್ಕಾರವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು. ‘ಟಿವಿ9’ ಜತೆ ಮಾತನಾಡಿದ ಅವರು, 2024ರ ಪರೀಕ್ಷಾ (ಅನುಚಿತ ವಿಧಾನಗಳ ತಡೆ) ಕಾಯಿದೆಯನ್ನು ಉಲ್ಲೇಖಿಸಿ, ಈ ಕಾನೂನು 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ. ದಂಡವನ್ನು ಒಳಗೊಂಡಿದೆ ಎಂದರು.

ಅರವಿಂದ್ ಕೇಜ್ರಿವಾಲ್ ಮತ್ತು ಇತರ ವಿರೋಧ ಪಕ್ಷಗಳು ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಜೋಶಿ, ಹಿಂದೆ ಪೇಪರ್ ಲೀಕ್‌ಗಳು ಸಾಮಾನ್ಯವಾಗಿದ್ದಾಗ ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಆರೋಪಿಸಿದರು. ಯುಪಿಎ ಅವಧಿಯಲ್ಲಿ 58 ಬಾರಿ, ರಾಜಸ್ಥಾನದಲ್ಲಿ ಐದು ವರ್ಷಗಳಲ್ಲಿ 19 ಬಾರಿ ಪೇಪರ್ ಲೀಕ್ ಆಗಿದ್ದ ಉದಾಹರಣೆಗಳನ್ನು ನೀಡಿದರು. ಆದರೆ ಈಗ ಮೋದಿ ಸರ್ಕಾರ ಹೊಸ ಕಾನೂನುಗಳನ್ನು ಜಾರಿಗೊಳಿಸಿ, ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸಿ, ವ್ಯವಸ್ಥೆಯಲ್ಲಿ ರಚನಾತ್ಮಕ ಬದಲಾವಣೆಗಳನ್ನು ತರಲು ಪ್ರಯತ್ನಿಸುತ್ತಿದೆ ಎಂದು ಸಮರ್ಥಿಸಿಕೊಂಡರು.

ಮರು ಪರೀಕ್ಷೆಗಳನ್ನು 38 ದಿನಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಮತ್ತು 11 ಲಕ್ಷ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ನಡೆಯುತ್ತಿದೆ ಎಂದು ಅವರು ತಿಳಿಸಿದರು. ತಮ್ಮ ಸರ್ಕಾರದ ಮೊದಲ ಆದ್ಯತೆ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸುವುದಾಗಿತ್ತು ಎಂದು ಹೇಳಿದರು. ಇದು ರಾಜೀನಾಮೆಗಳಿಂದ ಬಗೆಹರಿಯುವ ಸಮಸ್ಯೆ ಅಲ್ಲ, ಬದಲಿಗೆ ದೀರ್ಘಕಾಲೀನ ಪರಿಹಾರಗಳನ್ನು ಕಂಡುಕೊಳ್ಳುವುದು ಸರ್ಕಾರದ ಗುರಿಯಾಗಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More