ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಏನಂದ್ರು ನೋಡಿ
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಜನಪ್ರತಿನಿಧಿಗಳು ಆದರ್ಶವಾಗಿರಬೇಕು ಎಂದು ಹೇಳಿದ ಜೋಶಿ, ಸಂಪೂರ್ಣ ಮಾಹಿತಿ ಇಲ್ಲ ಎಂದು ತಿಳಿಸಿದರು. ಲಂಚದ ಮೊತ್ತದ ಬಗ್ಗೆ ಭಿನ್ನ ವರದಿಗಳಿರುವ ಕಾರಣ ಸತ್ಯಾಂಶಗಳನ್ನು ಕಲೆಹಾಕಿದ ನಂತರ ಮಾತನಾಡುವುದಾಗಿ ಅವರು ತಿಳಿಸಿದ್ದಾರೆ.
ಧಾರವಾಡ, ಫೆಬ್ರವರಿ 21: ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ, ಮಾಹಿತಿ ಪಡೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಜನಪ್ರತಿನಿಧಿಗಳಾದವರು ಬಹಳ ಜಾಗರೂಕರಾಗಿರಬೇಕು ಮತ್ತು ಜನರ ಕೆಲಸ ಮಾಡಲು ಬಂದಿರುತ್ತಾರೆ. ಸಾರ್ವಜನಿಕ ಬದುಕಿನಲ್ಲಿ ಜನರಿಗೆ ಆದರ್ಶವಾಗಿರಬೇಕು. ಪ್ರಾಥಮಿಕ ವರದಿಗಳನ್ನು ಗಮನಿಸಿದಾಗ ಈ ವಿಷಯ ಮನಸ್ಸಿಗೆ ಕಿರಿಕಿರಿ ಮತ್ತು ನೋವುಂಟು ಮಾಡಿದೆ. ಶಾಸಕರು ಈ ಕೃತ್ಯ ಎಸಗಿದ್ದಾರೆಯೇ ಅಥವಾ ಇಲ್ಲವೇ ಎಂಬ ನಿರ್ಧಾರಕ್ಕೆ ನಾನು ಬರುವುದಿಲ್ಲ. ಏಕೆಂದರೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ

