ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಏನಂದ್ರು ನೋಡಿ

Edited By:

Updated on: Feb 21, 2026 | 8:12 PM

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಜನಪ್ರತಿನಿಧಿಗಳು ಆದರ್ಶವಾಗಿರಬೇಕು ಎಂದು ಹೇಳಿದ ಜೋಶಿ, ಸಂಪೂರ್ಣ ಮಾಹಿತಿ ಇಲ್ಲ ಎಂದು ತಿಳಿಸಿದರು. ಲಂಚದ ಮೊತ್ತದ ಬಗ್ಗೆ ಭಿನ್ನ ವರದಿಗಳಿರುವ ಕಾರಣ ಸತ್ಯಾಂಶಗಳನ್ನು ಕಲೆಹಾಕಿದ ನಂತರ ಮಾತನಾಡುವುದಾಗಿ ಅವರು ತಿಳಿಸಿದ್ದಾರೆ.

ಧಾರವಾಡ, ಫೆಬ್ರವರಿ 21: ಗದಗ ಜಿಲ್ಲೆಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ,  ಮಾಹಿತಿ ಪಡೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಜನಪ್ರತಿನಿಧಿಗಳಾದವರು ಬಹಳ ಜಾಗರೂಕರಾಗಿರಬೇಕು ಮತ್ತು ಜನರ ಕೆಲಸ ಮಾಡಲು ಬಂದಿರುತ್ತಾರೆ. ಸಾರ್ವಜನಿಕ ಬದುಕಿನಲ್ಲಿ ಜನರಿಗೆ ಆದರ್ಶವಾಗಿರಬೇಕು. ಪ್ರಾಥಮಿಕ ವರದಿಗಳನ್ನು ಗಮನಿಸಿದಾಗ ಈ ವಿಷಯ ಮನಸ್ಸಿಗೆ ಕಿರಿಕಿರಿ ಮತ್ತು ನೋವುಂಟು ಮಾಡಿದೆ. ಶಾಸಕರು ಈ ಕೃತ್ಯ ಎಸಗಿದ್ದಾರೆಯೇ ಅಥವಾ ಇಲ್ಲವೇ ಎಂಬ ನಿರ್ಧಾರಕ್ಕೆ ನಾನು ಬರುವುದಿಲ್ಲ. ಏಕೆಂದರೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More