ಮಹಾಕುಂಭದಲ್ಲಿ ಕುಟುಂಬಸ್ಥರೊಂದಿಗೆ ಪವಿತ್ರಸ್ನಾನ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಕುಟುಂಬಸ್ಥರೊಂದಿಗೆ ಇಂದು ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಪ್ರಲ್ಹಾದ್ ಜೋಶಿ ಅವರೊಂದಿಗೆ ಅವರ ಪತ್ನಿ ಜ್ಯೋತಿ ಜೋಶಿ, ಪುತ್ರಿಯರಾದ ಅರ್ಪಿತಾ, ಅನನ್ಯ ಮತ್ತು ಅನುಷಾ ಜೋಶಿ, ಅವರ ಸಹೋದರ ಗೋವಿಂದ್ ಜೋಶಿ ಮತ್ತು ಅವರ ಪತ್ನಿ ಕಮಲಾ ಜೋಶಿ ಹಾಗೂ ಮಕ್ಕಳು, ಮೊಮ್ಮಕ್ಕಳು ಇದ್ದರು.
ಪ್ರಯಾಗರಾಜ್: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಇಂದು ತಮ್ಮ ಕುಟುಂಬಸ್ಥರೊಂದಿಗೆ ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮುಳುಗಿ, ಸಚಿವರು ಮಂತ್ರಗಳನ್ನು ಪಠಿಸುತ್ತಾ, ಜಾಗತಿಕ ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸುತ್ತಾ ತೀರ್ಥ ಸ್ನಾನ ಮಾಡಿದರು. ನಂತರ ಅವರು ತಮ್ಮ ಕುಟುಂಬದೊಂದಿಗೆ ಪೂಜ್ಯ ಭಗವಾನ್ ಹನುಮಾನ್ ದೇವಸ್ಥಾನ ಮತ್ತು ಅಕ್ಷಯವತ್‌ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಿದರು.
ಪ್ರಯಾಗರಾಜ್ನಲ್ಲಿ ಮಾತನಾಡಿದ ಪ್ರಲ್ಹಾದ್ ಜೋಶಿ, “ಮಹಾಕುಂಭ ಮೇಳವು ಹಿಂದೂ ಧರ್ಮದ ಒಂದು ದೊಡ್ಡ ಸಾಮೂಹಿಕ ತೀರ್ಥಯಾತ್ರೆಯಾಗಿದ್ದು, ಇದನ್ನು ಬಹಳ ಶ್ರದ್ಧೆಯಿಂದ ಯಶಸ್ವಿಯಾಗಿ ನಡೆಸಲಾಗುತ್ತಿದೆ. ತ್ರಿವೇಣಿ ಸಂಗಮದಲ್ಲಿ ನಮ್ಮ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡುವ ಸುವರ್ಣ ಅವಕಾಶ ಸಿಕ್ಕಿರುವುದು ನಮ್ಮ ದೊಡ್ಡ ಅದೃಷ್ಟ. ಇದು ನಮಗೆ ಭಕ್ತಿಯ ಮಹತ್ವದ ಮತ್ತು ದೈವಿಕ ಕ್ಷಣವಾಗಿದೆ” ಎಂದು ಸಂತೋಷ ವ್ಯಕ್ತಪಡಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ