The Kerala Story: ಕುಟುಂಬದ ಸದಸ್ಯರೊಂದಿಗೆ ಹುಬ್ಬಳ್ಳಿಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

|

Updated on: May 09, 2023 | 1:10 PM

ಚಿತ್ರ ವೀಕ್ಷಿಸಿದ ಬಳಿಕ ಮಾತಾಡಿದ ಸಚಿವರು ಚಿತ್ರ ಬಹಳ ನೈಜ್ಯವಾಗಿ ಮೂಡಿಬಂದಿದೆ ಎಂದು ಹೇಳಿದರು.

ಹುಬ್ಬಳ್ಳಿ: ನಿನ್ನೆಯವರೆಗೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಇಂದು ತಮ್ಮ ಕುಟುಂಬ ಸಮೇತ ನಗರದ ಥಿಯೇಟರೊಂದರಲ್ಲಿ ಭಾರಿ ಚರ್ಚೆಯಲ್ಲಿರುವ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾವನ್ನು ವೀಕ್ಷಸಿದರು. ಚಿತ್ರ ವೀಕ್ಷಿಸಿದ ಬಳಿಕ ಮಾತಾಡಿದ ಸಚಿವರು ಚಿತ್ರ ಬಹಳ ನೈಜ್ಯವಾಗಿ ಮೂಡಿಬಂದಿದೆ ಎಂದು ಹೇಳಿದರು. ಕೇರಳದಲ್ಲಿ (Kerala) ಹೇಗೆ ಬೇರೆ ಧರ್ಮಗಳ ಯುವತಿಯರನ್ನು ಪುಸಲಾಯಿಸಿ ಅವರ ಮನಪರಿವರ್ತನೆ ಮಾಡುವುದರ ಜೊತೆಗೆ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಿ ಇಸ್ಲಾಮಿಕ್ ಸ್ಟೇಟ್ (ISIS) ಸೇರುವಂತೆ ಮಾಡಲಾಗುತ್ತಿದೆ ಅನ್ನೋದನ್ನು ಚಿತ್ರಿಸಲಾಗಿದೆ ಎಂದು ಜೋಶಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ