ಎಸ್ಐಆರ್ ಆರೋಪಕ್ಕೆ ತಿರುಗೇಟು; ಖರ್ಗೆ ತವರು ಜಿಲ್ಲೆಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ!
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ (ಬುಧವಾರ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆಯಾದ ಕಲಬುರ್ಗಿಗೆ ಆಗಮಿಸಲಿದ್ದಾರೆ. ಕಲಬುರ್ಗಿಯಿಂದ ಬಿಜೆಪಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ಎಂಬ ಅಭಿಯಾನವನ್ನು ಶುರು ಮಾಡಲಿದೆ. ನಾಳೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ರಾಜ್ಯದ ಬಿಜೆಪಿ ನಾಯಕರು ಕೂಡ ಭಾಗವಹಿಸಲಿದ್ದಾರೆ. ಎಸ್ಐಆರ್ ವಿರುದ್ಧ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿ, ಮತದಾರರಿಗೆ ಅರಿವು ಮೂಡಿಸಲು ಈ ಪಾದಯಾತ್ರೆ ನಡೆಸಲಾಗುತ್ತಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಬೃಹತ್ ಪಾದಯಾತ್ರೆ ಶುರುವಾಗುತ್ತದೆ.
ಕಲಬುರಗಿ, ನವೆಂಬರ್ 24: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ (ಬುಧವಾರ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆಯಾದ ಕಲಬುರ್ಗಿಗೆ ಆಗಮಿಸಲಿದ್ದಾರೆ. ಕಲಬುರ್ಗಿಯಿಂದ ಬಿಜೆಪಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ಎಂಬ ಅಭಿಯಾನವನ್ನು ಶುರು ಮಾಡಲಿದೆ. ನಾಳೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ರಾಜ್ಯದ ಬಿಜೆಪಿ ನಾಯಕರು ಕೂಡ ಭಾಗವಹಿಸಲಿದ್ದಾರೆ. ಎಸ್ಐಆರ್ ವಿರುದ್ಧ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿ, ಮತದಾರರಿಗೆ ಅರಿವು ಮೂಡಿಸಲು ಈ ಪಾದಯಾತ್ರೆ ನಡೆಸಲಾಗುತ್ತಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಬೃಹತ್ ಪಾದಯಾತ್ರೆ ಶುರುವಾಗುತ್ತದೆ. ಕಲಬುರ್ಗಿಯ ನಗೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೂ ರಾಜನಾಥ್ ಸಿಂಗ್ ಪಾದಯಾತ್ರೆ ನಡೆಸಲಿದ್ದಾರೆ. ಬಳಿಕ ಜಗತ್ ವೃತ್ತದಲ್ಲಿ ಬೃಹತ್ ಬಹಿರಂಗ ಸಭೆಯನ್ನೂ ಕೂಡ ನಡೆಸಲಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಸಾವಿರ ಏನು ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಸಾಧ್ಯತೆ ಹೆಚ್ಚಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

