ಎಸ್​ಐಆರ್​ ಆರೋಪಕ್ಕೆ ತಿರುಗೇಟು; ಖರ್ಗೆ ತವರು ಜಿಲ್ಲೆಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ!

Edited By:

Updated on: Nov 24, 2026 | 10:18 PM

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ (ಬುಧವಾರ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆಯಾದ ಕಲಬುರ್ಗಿಗೆ ಆಗಮಿಸಲಿದ್ದಾರೆ. ಕಲಬುರ್ಗಿಯಿಂದ ಬಿಜೆಪಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ಎಂಬ ಅಭಿಯಾನವನ್ನು ಶುರು ಮಾಡಲಿದೆ. ನಾಳೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ರಾಜ್ಯದ ಬಿಜೆಪಿ ನಾಯಕರು ಕೂಡ ಭಾಗವಹಿಸಲಿದ್ದಾರೆ. ಎಸ್​ಐಆರ್​ ವಿರುದ್ಧ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿ, ಮತದಾರರಿಗೆ ಅರಿವು ಮೂಡಿಸಲು ಈ ಪಾದಯಾತ್ರೆ ನಡೆಸಲಾಗುತ್ತಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಬೃಹತ್ ಪಾದಯಾತ್ರೆ ಶುರುವಾಗುತ್ತದೆ.

ಕಲಬುರಗಿ, ನವೆಂಬರ್ 24: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ (ಬುಧವಾರ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆಯಾದ ಕಲಬುರ್ಗಿಗೆ ಆಗಮಿಸಲಿದ್ದಾರೆ. ಕಲಬುರ್ಗಿಯಿಂದ ಬಿಜೆಪಿ ಲೋಕತಂತ್ರ ಬಚಾವೋ, ಅರಾಜಕತಾ ಹಠಾವೋ ಎಂಬ ಅಭಿಯಾನವನ್ನು ಶುರು ಮಾಡಲಿದೆ. ನಾಳೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ರಾಜ್ಯದ ಬಿಜೆಪಿ ನಾಯಕರು ಕೂಡ ಭಾಗವಹಿಸಲಿದ್ದಾರೆ. ಎಸ್​ಐಆರ್​ ವಿರುದ್ಧ ಕಾಂಗ್ರೆಸ್ ಮಾಡಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿ, ಮತದಾರರಿಗೆ ಅರಿವು ಮೂಡಿಸಲು ಈ ಪಾದಯಾತ್ರೆ ನಡೆಸಲಾಗುತ್ತಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಬೃಹತ್ ಪಾದಯಾತ್ರೆ ಶುರುವಾಗುತ್ತದೆ. ಕಲಬುರ್ಗಿಯ ನಗೇಶ್ವರ ಶಾಲೆಯಿಂದ ಜಗತ್ ವೃತ್ತದವರೆಗೂ ರಾಜನಾಥ್ ಸಿಂಗ್ ಪಾದಯಾತ್ರೆ ನಡೆಸಲಿದ್ದಾರೆ. ಬಳಿಕ ಜಗತ್ ವೃತ್ತದಲ್ಲಿ ಬೃಹತ್ ಬಹಿರಂಗ ಸಭೆಯನ್ನೂ ಕೂಡ ನಡೆಸಲಿದ್ದಾರೆ. ಸುಮಾರು 20ಕ್ಕೂ ಹೆಚ್ಚು ಸಾವಿರ ಏನು ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಸಾಧ್ಯತೆ ಹೆಚ್ಚಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More