AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್​​: ಇವರು ಸಂಸತ್ತಿಗೆ ಅರ್ಹರೇ ಎಂದು ಪ್ರಶ್ನಿಸಿದ ಕೇಂದ್ರ ಸಚಿವೆ

ಡಿಲಿಮಿಟೇಶನ್ ಬಿಲ್ ಫ್ರಾಡ್ ಎಂದ ರಾಹುಲ್ ಗಾಂಧಿಗೆ ಶೋಭಾ ಕರಂದ್ಲಾಜೆ ಕೌಂಟರ್​​: ಇವರು ಸಂಸತ್ತಿಗೆ ಅರ್ಹರೇ ಎಂದು ಪ್ರಶ್ನಿಸಿದ ಕೇಂದ್ರ ಸಚಿವೆ

ಅನಿಲ್​ ಕಲ್ಕೆರೆ
| Edited By: |

Updated on: Nov 29, 2026 | 1:07 PM

Share

ಡಿಲಿಮಿಟೇಶನ್ ಬಿಲ್ 2026ರ ಕುರಿತು ರಾಹುಲ್ ಗಾಂಧಿ ಅವರ ಹೇಳಿಕೆಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದು, ಜನರಿಗೆ ಹೆಚ್ಚು ಪ್ರಾತಿನಿಧ್ಯ ನೀಡುವ ಮಸೂದೆಯನ್ನು 'ಫ್ರಾಡ್' ಎಂದು ಕರೆದಿರುವುದು ಅಸಂಬದ್ಧ ಎಂದು ಹೇಳಿದ್ದಾರೆ. ಜನರಿಗೆ ಹೆಚ್ಚು ಪ್ರತಿನಿಧಿಗಳನ್ನು ನೀಡುವುದು ಹೇಗೆ ಮೋಸ ಆಗುತ್ತೆ? ಇದರಲ್ಲಿ ಯಾವುದೇ ಗೊಂದಲ ಇಲ್ಲ. ರಾಜಕೀಯ ಲಾಭಕ್ಕಾಗಿ ಆ ಯತ್ನ ನಡೆಯುತ್ತಿದೆ ಅಷ್ಟೇ ಎಂದವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ನವೆಂಬರ್​​ 29: ಡಿಲಿಮಿಟೇಶನ್ ಬಿಲ್ 2026ರ ಕುರಿತು ರಾಹುಲ್ ಗಾಂಧಿ ಹೇಳಿಕೆಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ಕೌಂಟರ್​​ ನೀಡಿದ್ದಾರೆ.  ಮಸೂದೆಯನ್ನು ಫ್ರಾಡ್ ಎಂದು ರಾಹುಲ್ ಗಾಂಧಿ ಕರೆದಿರುವುದು ಅಸಂಬದ್ಧ. ಪ್ರಜಾಪ್ರಭುತ್ವದಲ್ಲಿ ಜನರಿಗೆ ಹೆಚ್ಚು ಪ್ರಾತಿನಿಧ್ಯ ನೀಡುವುದನ್ನು ಮೋಸ ಎಂದು ಪರಿಗಣಿಸುವುದು ಅವರ ಬುದ್ಧಿಮತ್ತೆಯ ಪ್ರಶ್ನೆಯಾಗಿದೆ. ಇಂತಹ ಹೇಳಿಕೆ ನೀಡುವವರು ಸಂಸತ್ತಿಗೆ ಅರ್ಹರೇ ಎಂದು ಕರಂದ್ಲಾಜೆ ಪ್ರಶ್ನಿಸಿದ್ದಾರೆ. ಜನರಿಗೆ ಹೆಚ್ಚು ಪ್ರತಿನಿಧಿಗಳನ್ನು ನೀಡುವುದು ಹೇಗೆ ಮೋಸ ಆಗುತ್ತೆ? ಇದರಲ್ಲಿ ಯಾವುದೇ ಗೊಂದಲ ಇಲ್ಲ. ರಾಜಕೀಯ ಲಾಭಕ್ಕಾಗಿ ಆ ಯತ್ನ ನಡೆಯುತ್ತಿದೆ ಅಷ್ಟೇ ಎಂದವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More