ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 17, 2023 | 11:05 AM

ಪಂಚಮಸಾಲಿ ಲಿಂಗಾಯತರ ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿವುದಾಗಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರದಂದು ಎಚ್ಚರಿಸಿದ್ದರು.

ಬೆಂಗಳೂರು: ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿಗಾಗಿ (2A reservation) ಭಗೀರಥ ಹೋರಾಟ ನಡೆಸುತ್ತಿರುವ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರನ್ನು (Basava Jaya Mrithyunjaya Swamiji)ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರು ಶುಕ್ರವಾರ ಬೆಳಗ್ಗೆ ಭೇಟಿಯಾದರು. ಸ್ವಾಮೀಜಿಗಳಿಗೆ ಫಲತಾಂಬೂಲ ನೀಡಿದ ಬಳಿಕ ಸಚಿವೆ ಶೋಭಾ ಪಾದಗಳಿಗೆ ನಮಸ್ಕರಿಸಿದರು. ಪಂಚಮಸಾಲಿ ಲಿಂಗಾಯತರ ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿವುದಾಗಿ ಸ್ವಾಮೀಜಿ ಗುರುವಾರದಂದು ಎಚ್ಚರಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Mar 17, 2023 11:05 AM